Photo Gallery: ರಾಜ್ಯದ ಗಮನ ಸೆಳೆದ ಮಾವು ಮೇಳ-2023

ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ವಿವಿಧ ಮಾವಿನ ತಳಿಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇ 23ರಿಂದ‌ ಮೇ 31ರವರೆಗೆ 10 ದಿನಗಳ ಕಾಲ ತೋಟಗಾರಿಕಾ ಇಲಾಖಾ ಆವರಣದಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 12ಕ್ಕೂ ಹೆಚ್ಚಿನ ಮಾವಿನ ತಳಿಗಳನ್ನು ರೈತರು ನೇರವಾಗಿ ಮಾರಾಟ ಮಾಡಲು ಅನುಕೂಲ ಕಲ್ಪಿಸಲಾಗಿದೆ.

1 /7

ಈ ಮೇಳದಲ್ಲಿ ಮೊದಲ ಬಾರಿಗೆ ಮೌಲ್ಯವರ್ಧಿತ ಉತ್ಪನ್ನಗಳಾದ ಮ್ಯಾಂಗೋ ರೋಲ್, ಮ್ಯಾಂಗೋ, ಸ್ಪೈಷ್, ಮಾವಿನ ಪಲ್ಪ, ಮಾವಿನ ಸಿಖಂಡ ಹಾಗೂ ಇತರೇ ಉತ್ಪನ್ನಗಳನ್ನು ಸಹ ಮಾರಾಟಕ್ಕೆ ಇಡಲಾಗಿದೆ.

2 /7

ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದ ಮಾವಿನ ವಿವಿಧ ತಳಿಗಳನ್ನು ಸಹ ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದೆ.

3 /7

ಮೇಳದಲ್ಲಿ ಕೇಸರ್, ಬೆನೆಶಾನ್, ದಶಹರಿ, ರಸಮರಿ, ಸ್ವರ್ಣರೇಖಾ, ಇಮಾಮ ಪಸಂಧ ಆಪೋಸು, ಮಲ್ಲಿಕಾ, ತೋತಾಪೂರಿ, ಪುನಾಸ್ ಸೇರಿದಂತೆ 100 ಕ್ಕೂ ಅಧಿಕ ವಿವಿಧ ತಳಿಯ ಮಾವಿನ ಹಣ್ಣುಗಳು ಪುನಾಸ್ ಮತ್ತು ಮಂಡಪ್ಪ ಉಪ್ಪಿನಕಾಯಿ ತಳಿಯ ಮಾವು, ಉಪ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳನ್ನು ಸಹ ಪ್ರದರ್ಶನದಲ್ಲಿ ಇಡಲಾಗಿದೆ

4 /7

ಜಗತ್ತಿನ ಅತ್ಯಂತ ದುಬಾರಿ ಹಣ್ಣಾದ "ಮೀಯಾ ಜಾಕಿ" ಎಂಬ ಜಪಾನ ತಳಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ

5 /7

10ಕ್ಕೂ ಹೆಚ್ಚಿನ ತೋಟಗಾರಿಕೆ ರೈತ ಉತ್ಪಾದಕ ಕಂಪನಿಗಳಲ್ಲದೇ ಜಿಲ್ಲಾ ಹಾಪಕಾಮ್ಸ್ ಸಂಸ್ಥೆಗಳಿಗೆ ಮಾವಿನ ಹಣ್ಣು ಮಾರಲು ಸ್ಟಾಲ್‌ಗಳ ವ್ಯವಸ್ಥೆ ಮಾಡಲಾಗಿದೆ.

6 /7

ಪ್ರದರ್ಶನದಲ್ಲಿ 100 ಕ್ಕೂ ಹೆಚ್ಚಿನ ದೇಶಿ ಮತ್ತು ವಿದೇಶಿ ಮಾವಿನ ತಳಿಗಳನ್ನು ಸುಸಜ್ಜಿತವಾಗಿ ಪ್ರದರ್ಶನದಲ್ಲಿ ಇಡಲಾಗಿದೆ.

7 /7

ಈ ಮೇಳದಲ್ಲಿ ಭಾಗವಹಿಸಲು 51 ಕ್ಕೂ ಹೆಚ್ಚಿನ ರೈತರು ನೋಂದಾಯಿಸಿದ್ದು, ರೈತರಿಗಾಗಿ ಉಚಿತವಾಗಿ 22 ಕ್ಕೂ ಹೆಚ್ಚಿನ ಸ್ಟಾಲ್ ಗಳನ್ನು ನಿರ್ಮಿಸಿ ಕೊಡಲಾಗಿದೆ.