Congress Five Guarantees: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಅದರಂತೆ ತನ್ನ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಎಲ್ಲಾ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಬದ್ಧತೆಯನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಸರ್ಕಾರ ಹೇಳಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರತಿಯೊಂದು ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯರ ಸರ್ಕಾರ ಘೋಷಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿರುವ ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ಸಿಗಲಿದೆ.
ಪ್ರತಿಯೊಂದು ಮನೆಯ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು.
ಅನ್ನಭಾಗ್ಯ ಯೋಜನೆಯ ಮೂಲಕ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು.
ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ.