Photos: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಶಿವೈಕ್ಯ; ಗಣ್ಯರ ಕಂಬನಿ

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ವಿಧಿವಶ ಹಿನ್ನೆಲೆಯಲ್ಲಿ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಶ್ರೀಗಳ ಲಿಂಗ ಶರೀರವನ್ನು ಇಡಲಾಗಿದ್ದು, ಸಾರ್ವಜನಿಕರಿಂದ ಶ್ರೀಗಳ ಅಂತಿಮ ದರ್ಶನ ಆರಂಭವಾಗಿದೆ. ಭಕ್ತರು, ಸಾರ್ವಜನಿಕರು ಸರದಿಯಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.

  • Jan 21, 2019, 20:08 PM IST

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಲಿಂಗ ಶರೀರಕ್ಕೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಡಾ.ಶಿವಕುಮಾರ ಸ್ವಾಮೀಜಿ ವಿಧಿವಶರಾಗಿರುವ ಸುದ್ದಿ ಕೇಳಿ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿದೆ. ಬದುಕನ್ನ ರೂಪಿಸಿದ್ದ ಸಿದ್ದಗಂಗಾ ಶ್ರೀಗಳನ್ನ ನೆನೆದು ಮಠದ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಇನ್ನು ಈ ಆಘಾತದ ಸುದ್ದಿ ತಿಳಿದು ಮಠದತ್ತ ಭಕ್ತ ಸಾಗರವೇ ಹರಿದು ಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿರೋದ್ರಿಂದ ನೂಕು ನುಗ್ಗಲು ಸಂಭವಿಸಿದ್ದು, ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅಂತಿಮ ದರ್ಶನ ಪಡೆಯುವಾಗ ಉತ್ತಮ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಶಾಂತ ರೀತಿಯಿಂದ ಅಂತಿಮ ದರ್ಶನ ಪಡೆಯಬೇಕು ಎಂದು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

1 /9

2 /9

3 /9

4 /9

5 /9

6 /9

7 /9

8 /9

9 /9