Photos: ಲೋಕಸಮರ 6ನೇ ಹಂತದಲ್ಲಿ ಮತ ಚಲಾಯಿಸಿದ ನಾಯಕರು!

Sun, 12 May 2019-3:31 pm,

ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಅವರು ರಾಷ್ಟ್ರಪತಿ ಭವನದ ಮತಗಟ್ಟೆಯಲ್ಲಿ ತಮ್ಮ ಪತ್ನಿಯೊಂದಿಗೆ ಆಗಮಿಸಿ ಮತ ಚಲಾಯಿಸಿದರು.   

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯ ಔರಂಗಜೇಬ್​ ಲೇನ್​ನಲ್ಲಿರುವ ಎನ್​ಪಿ ಸೀನಿಯರ್​ ಸೆಕೆಂಡರಿ ಸ್ಕೂಲ್​ ಮತಗಟ್ಟೆಯಲ್ಲಿ ಮತದಾನ ಮಾಡಿದರು.   

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಡಿಪಿಸಿಸಿ ಮುಖ್ಯಸ್ಥೆ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ  ಶೀಲಾ ದೀಕ್ಷಿತ್ ಅವರೊಂದಿಗೆ ಮತ ಚಲಾಯಿಸಿದರು.  

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರು ರಾಜಿಂದರ್​​ ನಗರದ ಮತಕೇಂದ್ರದಲ್ಲಿ ಮತದಾನದ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಗಂಭೀರ್ ಪ್ರತಿಸ್ಪರ್ಧಿಗಳಾಗಿ ಎಎಪಿ ಅಭ್ಯರ್ಥಿ ಆತಿಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ಕಣದಲ್ಲಿದ್ದಾರೆ.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ಅವರು ಜನಗ್ಪುರದ ಕಮಲಾ ನೆಹರು ಸರ್ಕಾರಿ ಸರ್ವೋದಯ ವಿದ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಸಹ ಬೆಳಿಗ್ಗೆಯೇ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸಿದ್ದಾರೆ.  

ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ, ಆಮ್ ಆದ್ಮಿ ಪಾರ್ಟಿ (ಎಎಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.  ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಸಹ ಬೆಳಿಗ್ಗೆಯೇ ಮತಚಲಾಯಿಸಿದ್ದಾರೆ. ಇವರು ಈ ಕ್ಷೇತ್ರದಲ್ಲಿ ಮೂರು ಬಾರಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (ಕಾಂಗ್ರೆಸ್) ವಿರುದ್ಧ ಸ್ಪರ್ಧಿಸಿದ್ದಾರೆ.

ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಬೆಳಿಗ್ಗೆಯೇ ಹರಿಯಾಣದಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಹರಿಯಾಣದ ಗುರುಗ್ರಾಮದ ಪೈನ್​ಕ್ರೆಸ್ಟ್​​​​ ಶಾಲೆಯ ಪೋಲಿಂಗ್​ ಬೂತ್​ಗೆ ಆಗಮಿಸಿದ ಕೊಹ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link