Photos: ಬೆವರು ಸುರಿಸಿ ದುಡಿವ ಜನರಿಗೆ ಮಹತ್ವದ ಮತದಾನ ಜಾಗೃತಿ ಪಾಠ

Mon, 08 May 2023-1:57 am,

ಕಾರಟಗಿ ತಾಲೂಕಿನ ತಾಲೂಕಿನ ಗುಂಡೂರು, ಹುಳ್ಕಿಹಾಳ್ ಹಾಗೂ ಚಳ್ಳೂರು ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನರೇಗಾದಡಿ ಜೀರಾಳ್ ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ ಎನ್.ಅವರು ಮಾತನಾಡಿ, ಮತದಾರರು ಯಾವುದೇ ಆಸೆ-ಆಮೀಷಕ್ಕೆ ಒಳಗಾಗದೆ ಮತದಾನ ಹಕ್ಕು ಚಲಾಯಿಸಬೇಕು ಎಂದರು.ಗುಂಡೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಕನಕಪ್ಪ ಅವರು ಮತದಾನದ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಇದೆ ವೇಳೆ ನರೇಗಾ ಕೂಲಿಕಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಗುಂಡೂರು ಪಿಡಿಓ ಮಹೆಬೂಬ್ ಸಾಬ್, ಹುಳ್ಕಿಹಾಳ್ ಪಿಡಿಓ ಹನುಮಂತಪ್ಪ ನಾಯಕ, ತಾಪಂ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಗ್ರಾಮ ಕಾಯಕ ಮಿತ್ರರು, ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿದಂತೆ ಕೂಲಿಕಾರರರು ಇದ್ದರು.

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯತಿಯ ಬೆಳವಿನಾಳ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಮೇ 7ರಂದು ನಡೆಯಿತು. ಕೊಪ್ಪಳ ತಾಲೂಕ ಸ್ವೀಪ್ ನೋಡಲ್ ಅಧಿಕಾರಿ ಹನಮಂತಪ್ಪ ಎಚ್ ಮಾತನಾಡಿ, ನರೇಗಾ ಕೂಲಿಕಾರರು ಮತದಾನ ಕೇಂದ್ರಕ್ಕೆ ಹೋಗಿ ಕಡ್ಡಾಯವಾಗಿ ಮತದಾನ ಮಾಡಬೇಕು. ಕುಟುಂಬದ ಸದಸ್ಯರಿಗೂ ಸಹ ಮತದಾನ ಮಾಡಲು ತಿಳಿಸಬೇಕು. ಯಾವುದೇ ಆಸೆ-ಆಮಿಷೆಗಳಿಗೆ ಒಳಗಾಗದೇ ನಿರ್ಬಿತರಾಗಿ ಮತ ಚಲಾಯಿಸಬೇಕು ಎಂದರು.

ಕನಕಗಿರಿ ತಾಲೂಕಿನ 11 ಗ್ರಾ.ಪಂ ವ್ಯಾಪ್ತಿಯಲ್ಲಿ ತಾಲೂಕು ಸ್ವೀಪ್ ಸಮಿತಿ ಹಾಗೂ ಗ್ರಾಪಂನಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ್ ಕಂದಕೂರ್ ಅವರು ಮಾತನಾಡಿ, ಕಳೆದ ಎರಡ್ಮೂರು ತಿಂಗಳಿನಿಂದದ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಮತದಾನ ಕುರಿತು ಅರಿವು ಮೂಡಿಸಲಾಗಿದೆ. ಮೇ.10ರಂದು ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನರೇಗಾ ಕೂಲಿ ಕಾರ್ಮಿಕರು ಗೈರು ಆಗದೇ ಮತದಾನ ಮಾಡಬೇಕು ಎಂದು ಮನವಿ ಮಾಡಿದರು. ಗ್ರಾಪಂ ಅಭಿವೃದ್ದಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಇನ್ನೀತರರು ಇದ್ದರು. 

ಗಿಣಿಗೇರಾ ಗ್ರಾಮದಲ್ಲಿ ಈ ಹಿಂದೆ ಕಡಿಮೆ ಮತದಾನವಾದ ಪ್ರಯುಕ್ತ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಗಿಣಿಗೇರಾ ಗ್ರಾಪಂ ಪಿಡಿಓ ಮಂಜುಳಾ ದೇವಿ ಹೂಗಾರ ಅವರನ್ನೊಳಗೊಂಡ ತಂಡವು ಗಿಣಿಗೇರಾ ಗ್ರಾಮದ ಊರ ಮುಂದಿನ ಕೆರೆಯ ಬೋಟಿನಲ್ಲಿ ಸ್ವೀಪ್ ಕಾರ್ಯಕ್ರಮದ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿತು. 

ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಪಂ ಇಓ, ಪಿಡಿಓಗಳು ಸೇರಿದಂತೆ ತಾಲೂಕು ಹಾಗೂ ಗ್ರಾಮಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಪಂ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಫ್ಟಿಗಳು, ಗ್ರಾಮ ಕಾಯಕ ಮಿತ್ರರು, ಗ್ರಾಮ ಪಂಚಾಯತಿ ಸಿಬ್ಬಂದಿ ಸಕ್ರಿಯ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link