ಈ ಎಲೆ ಜಗಿದು ತಿನ್ನಿ ಸಕ್ಕರೆ ಕಾಯಿಲೆ ಸಂಪೂರ್ಣ ಗುಣವಾಗುತ್ತದೆ... ವಯಸ್ಸು 60 ದಾಟಿದ್ರೂ ಮಧುಮೇಹ ಬರೋದೇ ಇಲ್ಲ! ಹೃದಯಾಘಾತಕ್ಕೆ ಇದೇ ಮದ್ದು
Diabetes home remedy: ಮಧುಮೇಹಿಗಳು ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ದಿನವಿಡೀ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರುಪೇರಾಗದಂತೆ ನಿಯಂತ್ರಿಸಬಹುದಾಗಿದೆ.
ಕರಿಬೇವಿನ ಎಲೆ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಕರಿಬೇವಿನ ಎಲೆ ಸೇವನೆಯು ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.
ಕರಿಬೇವಿನ ಎಲೆಯಲ್ಲಿ ಖನಿಜಗಳು, ಕ್ಯಾಲ್ಸಿಯಂ, ರಂಜಕ, ಫೈಬರ್, ಕಾರ್ಬೋಹೈಡ್ರೇಟ್, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿದ್ದು ದೇಹವನ್ನು ಆರೋಗ್ಯಕರವಾಗಿರಿಸುತ್ತದೆ.
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 3 - 4 ಕರಿಬೇವಿನ ಎಲೆಗಳನ್ನು ಅಗಿದು ತಿನ್ನಬೇಕು. ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ನಿಯಂತ್ರಣದಲ್ಲಿರುತ್ತದೆ.
ಕರಿಬೇವಿನ ಎಲೆಗಳ ಸೇವನೆಯು ಇನ್ಸುಲಿನ್ ಮಟ್ಟವನ್ನು ಸುಧಾರಿಸುವ ಮೂಲಕ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.
ಕರಿಬೇವಿನ ಎಲೆಯಲ್ಲಿರುವ ಫೀನಾಲಿಕ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕರಿಬೇವಿನ ಎಲೆಯ ಜ್ಯೂಸ್ ಮಾಡಿ ಕುಡಿಯುವುದರಿಂದಲೂ ಮಧುಮೇಹ ನಿಯಂತ್ರಿಸಬಹುದು. ಇದರಿಂದ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ.
ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.