PM Narendra Modi Bengaluru visit: ಪ್ರಧಾನಿ ಮೋದಿಯವರು ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್‍ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಪರ್ಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ಶುಕ್ರವಾರ(ಜ.19) ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಮುಖ್ಯಮಂತ್ರಿ @siddaramaiah ಅವರು ಬೋಯಿಂಗ್ ಇಂಡಿಯಾ ವತಿಯಿಂದ ಬೆಂಗಳೂರು ಹೈಟೆಕ್-ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ಆಯೋಜಿಸಿದ್ದ “ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ” ಮತ್ತು “ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ… pic.twitter.com/Ybh3MonBh1
— CM of Karnataka (@CMofKarnataka) January 19, 2024
ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ @narendramodi ಅವರನ್ನು ಮುಖ್ಯಮಂತ್ರಿ @siddaramaiah ಅವರು ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಲ್ಲಿ ಬರಮಾಡಿಕೊಂಡು, ಕುಶಲೋಪರಿ ವಿಚಾರಿಸಿದರು.#BoeingIndiaEngineeringCentre pic.twitter.com/FC8YEW4nrb
— CM of Karnataka (@CMofKarnataka) January 19, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್‍ನ ಉದ್ಘಾಟನೆ ಇಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು.
ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಬೇಕಿತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹೂಗುಚ್ಛ ನೀಡುವ ಮೂಲಕ ಪ್ರಧಾನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸಹ ಈ ವೇಳೆ ಹಾಜರಿದ್ದರು ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದರು.
ಬಳಿಕ ಪ್ರಧಾನಿ ಮೋದಿಯವರು 43 ಎಕರೆ ಕ್ಯಾಂಪಸ್‌ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು. ಇದೇ ವೇಳೆ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.