World Lion day 2021: ‘ಕಾಡಿನ ರಾಜ’ನ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ...

Tue, 10 Aug 2021-2:39 pm,

‘ಸಿಂಹವು ಗಂಭೀರ ಮತ್ತು ಧೈರ್ಯಶಾಲಿ. ಏಷಿಯಾಟಿಕ್ ಸಿಂಹಕ್ಕೆ ತವರು ಎಂದು ಭಾರತ ಹೆಮ್ಮೆ ಪಡುತ್ತದೆ. ವಿಶ್ವ ಸಿಂಹ ದಿನದಂದು ಸಿಂಹ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವ ಎಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಕಳೆದ ಕೆಲವು ವರ್ಷಗಳಲ್ಲಿ ಭಾರತದ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಹೆಚ್ಚಳ ಕಂಡುಬಂದಿದೆ ಎಂದು ಹೇಳಲು ಸಂತೋಷವಾಗುತ್ತದೆ’ ಅಂತಾ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಗುಜರಾತ್​ನಲ್ಲಿ ನಡೆದ ಗಣತಿಯ ಪ್ರಕಾರ ಸಿಂಹಗಳ ಸಂಖ್ಯೆಯಲ್ಲಿ ಏರಿಕೆ ಕಂಡಿರುವುದು ತಿಳಿದು ಬಂದಿದೆ. ಭಾರತದಲ್ಲಿ 2015ರ ಗಣತಿಯ ಪ್ರಕಾರ 523 ಸಿಂಹಗಳು ಹಾಗೂ 2020ರಲ್ಲಿ ನಡೆದ ಗಣತಿಯ ಪ್ರಕಾರ ಒಟ್ಟು 674 ಸಿಂಹಗಳು ಇರುವುದು ತಿಳಿದುಬಂದಿದೆ. ಕಳೆದ 5 ವರ್ಷಗಳಲ್ಲಿ ಸಿಂಹಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

ಏಷ್ಯಾ, ಆಫ್ರಿಕಾ ಹಾಗೂ ಯುರೋಪಿನಾದ್ಯಂತ 3 ಮಿಲಿಯನ್ ವರ್ಷಗಳ ಹಿಂದೆಯೇ ಸಿಂಹಗಳು ಮುಕ್ತವಾಗಿ ಸಂಚರಿಸುತ್ತಿದ್ದವು. ಕಳೆದ 100 ವರ್ಷಗಳಲ್ಲಿ ಗಮನಿಸಿದರೆ ಶೇ.80ರಷ್ಟು ಕಣ್ಮರೆಯಾಗಿವೆ ಎಂದು ಅಂಕಿ-ಅಂಶಗಳು ತಿಳಿಸುತ್ತವೆ. ಇತ್ತೀಚಿಗಿನ ಸಮೀಕ್ಷೆಯೊಂದರ ಪ್ರಕಾರ ಸಿಂಹಗಳ ಸಂಖ್ಯೆ 30 ಸಾವಿರದಿಂದ  20 ಸಾವಿರಕ್ಕೆ ಇಳಿಕೆಯಾಗಿದೆ ಅಂತಾ ತಿಳಿದುಬಂದಿದೆ.   

ಭಾರತದಲ್ಲಿ ಹೆಚ್ಚಾಗಿ ಏಷ್ಯಾಟಿಕ್​ ಸಿಂಹಗಳು ಕಂಡುಬರುತ್ತವೆ. ಅವುಗಳು ನಿರ್ಬಂಧಿತ ಗಿರ್ ಅರಣ್ಯದಲ್ಲಿ ಮತ್ತು ರಾಷ್ಟ್ರೀಯ ಉದ್ಯಾನವನದಲ್ಲಿ ಕಂಡು ಬರುತ್ತವೆ. ಹೀಗಾಗಿ ಏಷ್ಯಾಟಿಕ್ ಸಿಂಹಕ್ಕೆ ಭಾರತವೇ ತವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು.

ಭಾರತದಲ್ಲಿ ಸಿಂಹಗಳು ವರ್ಣಚಿತ್ರ, ಸಾಹಿತ್ಯ ಮತ್ತು ರಾಜ ಲಾಂಛನಗಳ ಜೊತೆಗೆ ಸಾಂಸ್ಕೃತಿಕ ಗುರುತಿನ ಒಂದು ಭಾಗವಾಗಿದೆ. ಬ್ರಿಟೀಷ್ ವಸಾಹತುಶಾಹಿ ಆಳ್ವಿಕೆಯಲ್ಲಿ ಸಿಂಹಗಳನ್ನು ದೊಡ್ಡ ಪ್ರಮಾಣದಲ್ಲಿ ಬೇಟಿಯಾಡಲಾಯಿತು. ಬಳಿಕ ಸಿಂಹಗಳ ಸಂಖ್ಯೆ ಇಳಿಕೆಯ ಹಾದಿ ಹಿಡಿಯಿತು ಅಂತಾ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.  

ಭಾರತ ಸರ್ಕಾರವು ಸಿಂಹಗಳನ್ನು ರಕ್ಷಣೆಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಅರಣ್ಯ ನಾಶ, ಅತಿಯಾದ ಬೇಟೆಯಿಂದಾಗಿ ಕಾಡಿನಲ್ಲಿ ಒಂಟಿಯಾಗಿ ಅಲೆಯುವ ಸಿಂಹಗಳ ಘರ್ಜನೆ ದಿನೇ ದಿನೇ ಕ್ಷೀಣಿಸುತ್ತಿದೆ. ಹೀಗಾಗಿ ಸಿಂಹಗಳ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆ ಕಂಡು ಬರುತ್ತಿದೆ. ಸಿಂಹಗಳ ಸಂರಕ್ಷಣೆ ಪ್ರತಿಯೊಬ್ಬ ಭಾರತೀಯ ನಾಗರಿಕನ ಕರ್ತವ್ಯವಾಗಿದೆ. ಇರುವ ಅಲ್ಪಪ್ರಮಾಣದ ಸಿಂಹಗಳನ್ನು ರಕ್ಷಿಸುವ ಮಹತ್ತರ ಜವಾವ್ದಾರಿ ನಮ್ಮ ಮೇಲಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link