ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾಗವಹಿಸಿರುವ ಭಾರತೀಯ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಪಹಾರ ಕೂಟದಲ್ಲಿ ಭೇಟಿ ಮಾಡಿದ್ದಾರೆ.
ನವದೆಹಲಿ : ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾಗವಹಿಸಿರುವ ಭಾರತೀಯ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಪಹಾರ ಕೂಟದಲ್ಲಿ ಭೇಟಿ ಮಾಡಿದ್ದಾರೆ. ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು 7 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ ಅದ್ಭುತ ಆಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಟೋಕಿಯೊ ಒಲಿಂಪಿಕ್ಸ್ನ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಭಾರತೀಯ ಕುಸ್ತಿಪಟುಗಳನ್ನು ಭೇಟಿ ಮಾಡಿದರು.ಕುಸ್ತಿಯಲ್ಲಿ ಭಾರತವು 2 ಪದಕಗಳನ್ನು ಗೆದ್ದಿದೆ.
ಭಾರತೀಯ ಪುರುಷರ ಹಾಕಿ ತಂಡ ಕೂಡಾ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಉಪಹಾರ ಕೂಟದಲ್ಲಿ ಭಾಗಿಯಾಗಿತ್ತು.
41 ವರ್ಷಗಳ ನಂತರ ಹಾಕಿಯಲ್ಲಿ ಒಲಿಂಪಿಕ್ ಪದಕ ಗೆದ್ದ ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜೊತೆ ಐಸ್ ಕ್ರೀಂ ತಿನ್ನುವುದಾಗಿ ಈ ಹಿಂದೆ ನೀಡಿದ್ದ ಮಾತನ್ನು ಪ್ರಧಾನಿ ನೆರವೇರಿಸಿದ್ದಾರೆ.
ಇದರೊಂದಿಗೆ ಪಿವಿ ಸಿಂಧು ಪಿಎಂ ಮೋದಿಗೆ ರಿಯೋ ಒಲಿಂಪಿಕ್ಸ್ 2016 ರ ಬೆಳ್ಳಿ ಪದಕ ಮತ್ತು ಟೋಕಿಯೊ ಒಲಿಂಪಿಕ್ಸ್ ನ ಕಂಚಿನ ಪದಕವನ್ನು ತೋರಿಸಿದರು.