ಗುರುವಾಯೂರ್ ದೇವಾಲಯದಲ್ಲಿ ಪ್ರಧಾನಿ ಮೋದಿಯಿಂದ ವಿಶೇಷ ಪೂಜೆ; ತುಲಾಭಾರ ಸೇವೆ- Photos

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇತಿಹಾಸ ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.

  • Jun 08, 2019, 19:11 PM IST

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಶ್ರೀಕೃಷ್ಣನ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು.ಕೇರಳದ ತಿಶ್ರೂರ್ ಗೆ ಶನಿವಾರ ಬೆಳಿಗ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಗುರುವಾಯೂರ್ ನಲ್ಲಿರುವ ಶ್ರೀಕೃಷ್ಣನ ದೇವಾಲಯದಲ್ಲಿ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ನೆರವೇರಿಸಿದರು. ಇದಕ್ಕಾಗಿ 112 ಕೆ.ಜಿ.ಯಷ್ಟು ಕಮಲದ ಹೂಗಳನ್ನು ತರಿಸಲಾಗಿತ್ತು. 

1 /6

ಕೇರಳದ ತಿಶ್ರೂರ್ ಗೆ ಶನಿವಾರ ಬೆಳಿಗ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬಳಿಕ ಐತಿಹಾಸಿಕ ಗುರುವಾಯೂರ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

2 /6

ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಶ್ರೀಕೃಷ್ಣನ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು.

3 /6

ಬಿಳಿ ಬಣ್ಣದ ಧೋತಿ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸಾಥ್ ನೀಡಿದರು.

4 /6

ಪ್ರಧಾನಿ ನರೇಂದ್ರ ಮೋದಿ, ಗುರುವಾಯೂರ್ ನಲ್ಲಿರುವ ಶ್ರೀಕೃಷ್ಣನ ದೇವಾಲಯದಲ್ಲಿ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ನೆರವೇರಿಸಿದರು. ಇದಕ್ಕಾಗಿ 112 ಕೆ.ಜಿ.ಯಷ್ಟು ಕಮಲದ ಹೂಗಳನ್ನು ತರಿಸಲಾಗಿತ್ತು.

5 /6

ಪ್ರಧಾನಿ ಮೋದಿ ಅವರು ದೇವರಿಗೆ ಕದಳಿ ಬಾಳೆ, ಹಾಲು ಪರಮಾನ್ನ, ತುಪ್ಪ ಸಮರ್ಪಿಸಿದರು.

6 /6

ಸುಮಾರು 5000 ವರ್ಷಗಳ ಇತಿಹಾಸವಿರುವ ಗುರುವಾಯೂರ್ ದೇವಾಲಯದ ಕೇರಳದ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ.