ಇಂದು ಬುಂದೇಲ್‌ಖಂಡ ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಸುಮಾರು 14,850 ಕೋಟಿ ರೂ. ವೆಚ್ಚದಲ್ಲಿ 296 ಕಿ.ಮೀ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಿದೆ. ಈ 4 ಲೇನ್ ಎಕ್ಸ್‌ಪ್ರೆಸ್‌ವೇಯನ್ನು ನಂತರ 6 ಲೇನ್‌ಗಳಿಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ನವದೆಹಲಿ: ಪ್ರಧಾನಿ ಮೋದಿ ಇಂದು(ಜುಲೈ 16) ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಲಿದ್ದಾರೆ. ಉತ್ತರ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಇದು ತುಂಬಾ ಮಹತ್ವದ ಎಕ್ಸ್‌ಪ್ರೆಸ್‌ ವೇ ಎಂದು ಹೇಳಲಾಗಿದೆ. ಕಳೆದ 7 ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪ್ರಕ್ರಿಯೆಯಲ್ಲಿ 3 ಪಟ್ಟು ವೇಗ ಸಿಕ್ಕಿದೆ. ಈ ಹಿಂದೆ 1 ದಿನಕ್ಕೆ 12 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗುತ್ತಿತ್ತು. ಅದರೆ 2020-21ರಲ್ಲಿ ಒಂದೇ ದಿನಕ್ಕೆ 37 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೇ ಪ್ರಧಾನಿ ಮೋದಿ ಮೂಲಸೌಕರ್ಯ ಮತ್ತು ಸಂಪರ್ಕ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ 2022-23ರ ಬಜೆಟ್‌ನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ 1.99 ಲಕ್ಷ ಕೋಟಿ ರೂ. ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

2020ರ ಫೆಬ್ರವರಿ 29ರಂದು  ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕಿದ್ದರು. ಈ ಎಕ್ಸ್‌ಪ್ರೆಸ್‌ವೇ ಕೆಲಸವು ಕೇವಲ 28 ತಿಂಗಳೊಳಗೆ ಪೂರ್ಣಗೊಂಡಿದೆ. 2020ರಲ್ಲಿ ಶಂಕುಸ್ಥಾಪನೆ ಮಾಡುವ ವೇಳೆ 36 ತಿಂಗಳ ಡೆಡ್‌ಲೈನ್‌ ನೀಡಲಾಗಿತ್ತು. ಡೆಡ್‌ಲೈನ್‌ಗಿಂತ 8 ತಿಂಗಳ ಮುಂಚಿತವಾಗಿಯೇ ಇದರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸುಮಾರು 14,850 ಕೋಟಿ ರೂ. ವೆಚ್ಚದಲ್ಲಿ 296 ಕಿ.ಮೀ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಿದೆ. ಈ 4 ಲೇನ್ ಎಕ್ಸ್‌ಪ್ರೆಸ್‌ವೇಯನ್ನು ನಂತರ 6 ಲೇನ್‌ಗಳಿಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

2 /5

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ವಿಸ್ತರಣೆಯು ಚಿತ್ರಕೂಟ್ ಜಿಲ್ಲೆಯ ಭರತ್‌ಕುಪ್ ಬಳಿಯ ಗೊಂಡಾ ಗ್ರಾಮದ NH-35 ನಿಂದ ಇಟಾವಾ ಜಿಲ್ಲೆಯ ಕುದ್ರೈಲ್ ಗ್ರಾಮಕ್ಕೆ ವಿಸ್ತರಣೆಯಾಗಿದೆ. ಇಲ್ಲಿ ಇದು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯನ್ನು ಸಂಧಿಸುತ್ತದೆ.

3 /5

ಈ ಪ್ರದೇಶದಲ್ಲಿ ಸಂಪರ್ಕ ಸುಧಾರಿಸುವುದರ ಜೊತೆಗೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಆರ್ಥಿಕ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಲಿದೆ. ಸ್ಥಳೀಯರಿಗೆ ಸಾವಿರಾರು ಉದ್ಯೋಗಗಳು ಇಲ್ಲಿ ಸೃಷ್ಟಿಯಾಗಲಿವೆ. ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿ ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ.

4 /5

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ್, ಜಲೌನ್, ಔರೈಯಾ ಮತ್ತು ಇಟಾವಾ ಎಂಬ 7 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಇದು ಉತ್ತರ ಪ್ರದೇಶದ 6ನೇ ಎಕ್ಸ್‌ಪ್ರೆಸ್‌ವೇ ಆಗಿದೆ. ಇದರೊಂದಿಗೆ ಇನ್ನೂ 7 ಎಕ್ಸ್‌ಪ್ರೆಸ್‌ ವೇಗಳು ನಿರ್ಮಾಣ ಹಂತದಲ್ಲಿವೆ.

5 /5

ಶುಕ್ರವಾರವೇ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ‘ನಾಳೆ ಅಂದರೆ ಜುಲೈ 16ರಂದು ಬುಂದೇಲ್‌ಖಂಡ್ ಪ್ರದೇಶದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ದಿನವಾಗಿದೆ. ಜಲೌನ್ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಳ್ಳಲಿದೆ. ಈ ಯೋಜನೆಯು ಸ್ಥಳೀಯ ಆರ್ಥಿಕತೆ ಮತ್ತು ಸಂಪರ್ಕವನ್ನು ಹೆಚ್ಚಿಸುತ್ತದೆ’ ಎಂದು ಹೇಳಿದ್ದರು.