ಇಂದು ಬುಂದೇಲ್‌ಖಂಡ ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

Sat, 16 Jul 2022-8:19 am,

2020ರ ಫೆಬ್ರವರಿ 29ರಂದು  ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕಿದ್ದರು. ಈ ಎಕ್ಸ್‌ಪ್ರೆಸ್‌ವೇ ಕೆಲಸವು ಕೇವಲ 28 ತಿಂಗಳೊಳಗೆ ಪೂರ್ಣಗೊಂಡಿದೆ. 2020ರಲ್ಲಿ ಶಂಕುಸ್ಥಾಪನೆ ಮಾಡುವ ವೇಳೆ 36 ತಿಂಗಳ ಡೆಡ್‌ಲೈನ್‌ ನೀಡಲಾಗಿತ್ತು. ಡೆಡ್‌ಲೈನ್‌ಗಿಂತ 8 ತಿಂಗಳ ಮುಂಚಿತವಾಗಿಯೇ ಇದರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸುಮಾರು 14,850 ಕೋಟಿ ರೂ. ವೆಚ್ಚದಲ್ಲಿ 296 ಕಿ.ಮೀ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಿದೆ. ಈ 4 ಲೇನ್ ಎಕ್ಸ್‌ಪ್ರೆಸ್‌ವೇಯನ್ನು ನಂತರ 6 ಲೇನ್‌ಗಳಿಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ವಿಸ್ತರಣೆಯು ಚಿತ್ರಕೂಟ್ ಜಿಲ್ಲೆಯ ಭರತ್‌ಕುಪ್ ಬಳಿಯ ಗೊಂಡಾ ಗ್ರಾಮದ NH-35 ನಿಂದ ಇಟಾವಾ ಜಿಲ್ಲೆಯ ಕುದ್ರೈಲ್ ಗ್ರಾಮಕ್ಕೆ ವಿಸ್ತರಣೆಯಾಗಿದೆ. ಇಲ್ಲಿ ಇದು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯನ್ನು ಸಂಧಿಸುತ್ತದೆ.

ಈ ಪ್ರದೇಶದಲ್ಲಿ ಸಂಪರ್ಕ ಸುಧಾರಿಸುವುದರ ಜೊತೆಗೆ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಆರ್ಥಿಕ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಲಿದೆ. ಸ್ಥಳೀಯರಿಗೆ ಸಾವಿರಾರು ಉದ್ಯೋಗಗಳು ಇಲ್ಲಿ ಸೃಷ್ಟಿಯಾಗಲಿವೆ. ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿ ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ.

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ್, ಜಲೌನ್, ಔರೈಯಾ ಮತ್ತು ಇಟಾವಾ ಎಂಬ 7 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಇದು ಉತ್ತರ ಪ್ರದೇಶದ 6ನೇ ಎಕ್ಸ್‌ಪ್ರೆಸ್‌ವೇ ಆಗಿದೆ. ಇದರೊಂದಿಗೆ ಇನ್ನೂ 7 ಎಕ್ಸ್‌ಪ್ರೆಸ್‌ ವೇಗಳು ನಿರ್ಮಾಣ ಹಂತದಲ್ಲಿವೆ.

ಶುಕ್ರವಾರವೇ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ‘ನಾಳೆ ಅಂದರೆ ಜುಲೈ 16ರಂದು ಬುಂದೇಲ್‌ಖಂಡ್ ಪ್ರದೇಶದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ದಿನವಾಗಿದೆ. ಜಲೌನ್ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಳ್ಳಲಿದೆ. ಈ ಯೋಜನೆಯು ಸ್ಥಳೀಯ ಆರ್ಥಿಕತೆ ಮತ್ತು ಸಂಪರ್ಕವನ್ನು ಹೆಚ್ಚಿಸುತ್ತದೆ’ ಎಂದು ಹೇಳಿದ್ದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link