ದಾಳಿಂಬೆ ಸಿಪ್ಪೆಯ ಪ್ರಯೋಜನಗಳೇನು ಗೊತ್ತಾ?

Wed, 03 Jan 2024-1:38 pm,

ದಾಳಿಂಬೆ ಸೇವನೆಯಿಂದ ಹೃದಯ ಸಂಬಂಧಿ ಸಮಸ್ಯೆ, ಮಧುಮೇಹದಂತಹ ಸಮಸ್ಯೆಗಳು ದೂರವಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆದರೆ ಈ ಹಣ್ಣಿನ ಸಿಪ್ಪೆಯಿಂದ ಹಲವು ಲಾಭಗಳಿವೆ ಎನ್ನುತ್ತಾರೆ ತಜ್ಞರು. ಈಗ ದಾಳಿಂಬೆ ಸಿಪ್ಪೆಯ ಪ್ರಯೋಜನಗಳನ್ನು ತಿಳಿಯೋಣ.

ದಾಳಿಂಬೆಯ ಸಿಪ್ಪೆಯಲ್ಲಿ ವಿವಿಧ ರೀತಿಯ ಪೋಷಕಾಂಶಗಳು ಅಡಗಿರುತ್ತವೆ. ಇದು ವಿಶೇಷವಾಗಿ ಪ್ರೋಟೀನ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ.

ದಾಳಿಂಬೆ ಸಿಪ್ಪೆಯು ಹೃದಯದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದಾಳಿಂಬೆಯ ಸಿಪ್ಪೆಯನ್ನು ಒಣಗಿಸಿ ಅದಕ್ಕೆ ಜೇನುತುಪ್ಪ ಮತ್ತು ನಿಂಬೆರಸ ಬೆರೆಸಿ ತ್ವಚೆಯ ಮೇಲೆ ಹಚ್ಚುವುದರಿಂದ ಮುಖದಲ್ಲಿನ ಮೊಡವೆಗಳು ಗುಣವಾಗಿ ಸುಂದರ ಸ್ಕಿನ್‌ ಟೋನ್‌ ನಿಮ್ಮದಾಗುತ್ತದೆ. 

ದಾಳಿಂಬೆ ಸಿಪ್ಪೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ದಾಳಿಂಬೆ ಸಿಪ್ಪೆಯು ತುಂಬಾ ಪ್ರಯೋಜನಕಾರಿಯಾಗಿದೆ.

ಸಂಧಿವಾತ ಮತ್ತು ಗಂಟಲು ನೋವು ನಿವಾರಣೆಗೆ ದಾಳಿಂಬೆ ಸಿಪ್ಪೆಯನ್ನು ಕುದಿಸಿ ಜ್ಯೂಸ್ ಮಾಡಿ ಕುಡಿಯಬೇಕು. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link