T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸತತ ಶೂನ್ಯಕ್ಕೆ ಔಟಾಗಿರುವುದು ಅಂದರೆ ಅದು ಕಳಪೆ ಪ್ರದರ್ಶನವೇ ಸರಿ.
ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾದ ಭಾರತದ 6 ಬಲಿಷ್ಠ ಬ್ಯಾಟ್ಸ್ಮನ್ಗಳಿದ್ದಾರೆ. ಈ ಪಟ್ಟಿಯಲ್ಲಿ ದಿಗ್ಗಜ್ಜ ಬ್ಯಾಟ್ಸ್ ಮೆನ್ ಗಳ ಹೆಸರೂ ಇದೆ. ಸತತ ಎರಡು T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿರುವುದು ಅಂದರೆ ಅದು ಕಳಪೆ ಪ್ರದರ್ಶನವೇ ಸರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅಂಬಟಿ ರಾಯುಡು ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅವಮಾನಕರ ದಾಖಲೆ ಹೊಂದಿದ್ದಾರೆ. 2015ರಲ್ಲಿ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಧರ್ಮಶಾಲಾ T20 ಪಂದ್ಯದಲ್ಲಿ ಅಂಬಟಿ ರಾಯುಡು ಶೂನ್ಯಕ್ಕೆ ಔಟಾದರೆ, ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಕಟಕ್ T20 ನಲ್ಲಿಯೂ ಖಾತೆ ತೆರೆಯದೆ ಪೆವಿಲಿಯನ್ಗೆ ಮರಳಿದ್ದರು.
ಟೀಂ ಇಂಡಿಯಾದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ವಾಷಿಂಗ್ಟನ್ ಸುಂದರ್ 2020 ರಲ್ಲಿ ಶ್ರೀಲಂಕಾ ವಿರುದ್ಧ ಪುಣೆ T20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾದರು.ನಂತರ,ವೆಲ್ಲಿಂಗ್ಟನ್ T20 ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯದಲ್ಲಿಯೂ ಇವರದ್ದು ಶೂನ್ಯ ಸಂಪಾದನೆ.
ಕೆಎಲ್ ರಾಹುಲ್ ಅವರು ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗುವ ಅವಮಾನಕರ ದಾಖಲೆ ಹೊಂದಿದ್ದಾರೆ.2021 ರಂದು ಇಂಗ್ಲೆಂಡ್ ವಿರುದ್ಧದ ಅಹಮದಾಬಾದ್ T20 ಪಂದ್ಯದಲ್ಲಿ KL ರಾಹುಲ್ ಶೂನ್ಯಕ್ಕೆ ಔಟಾದರು. ಇದರ ನಂತರ, 16 ಮಾರ್ಚ್ 2021 ರಂದು ಅಹಮದಾಬಾದ್ T20 ನಲ್ಲಿಯೂ ಇದೇ ಘಟನೆ ಮರುಕಳಿಸಿದೆ.
ಟೀಂ ಇಂಡಿಯಾದ ಆಲ್ ರೌಂಡರ್ ದೀಪಕ್ ಹೂಡಾ 30 ಅಕ್ಟೋಬರ್ 2022 ರಂದು ಪರ್ತ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ದೀಪಕ್ ಹೂಡಾ ಶೂನ್ಯಕ್ಕೆ ಔಟಾದರು. ಇದರ ನಂತರ, 20 ನವೆಂಬರ್ 2022 ರಂದು ಮೌಂಟ್ ಮೌಂಗನುಯಿ T20 ನಲ್ಲಿ ನ್ಯೂಜಿಲೆಂಡ್ ವಿರುದ್ಧದವೂ ಸೊನ್ನೆ ಸಂಪಾದನೆ.
ರೋಹಿತ್ ಶರ್ಮಾ 11 ಜನವರಿ 2024 ರಂದು ಅಫ್ಘಾನಿಸ್ತಾನ ವಿರುದ್ಧ ಮೊಹಾಲಿ T20 ಪಂದ್ಯದಲ್ಲಿ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರು. ಇದರ ನಂತರ, 14 ಜನವರಿ 2024 ರಂದು ಇಂದೋರ್ T20 ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ಸೊಂನೀ ಔಟಾಗುವ ಮೂಲಕ ಕಳಪೆ ದಾಖಲೆ ಬರೆದಿದ್ದಾರೆ.
ಸಂಜು ಸ್ಯಾಮ್ಸನ್ 10 ನವೆಂಬರ್ 2024 ರಂದು ದಕ್ಷಿಣ ಆಫ್ರಿಕಾ ವಿರುದ್ಧದ T20 ನಲ್ಲಿ ಸಂಜು ಔಟಾದರು. ಇದರ ನಂತರ, 13 ನವೆಂಬರ್ 2024 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಸೆಂಚುರಿಯನ್ ನಲ್ಲಿಯೂ ಖಾತೆ ತೆರೆಯದೆ ಪೆವಿಲಿಯನ್ಗೆ ಮರಳಿದರು.