ಕ್ಯಾನ್ಸರ್ ತಡೆಯಬಲ್ಲ ಪವರ್‌ಫುಲ್ ಹಣ್ಣು... ವಾರಕ್ಕೊಮ್ಮೆ ತಿಂದರೆ ಸಾಕು ಪಥ್ಯವಿಲ್ಲದೇ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್!
ಕರಬೂಜ ಆರೋಗ್ಯಕರ ಹಣ್ಣು. ಕರಬೂಜ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಕರಬೂಜದಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಲೈಕೋಪೀನ್ ಮತ್ತು ಪೊಟಾಶಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದು 92% ನೀರನ್ನು ಒಳಗೊಂಡಿದೆ.
ದೇಹವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಲೈಕೋಪೀನ್ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದು ಕ್ಯಾನ್ಸರ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕರಬೂಜದಲ್ಲಿ ವಿಟಮಿನ್ ಎ ಮತ್ತು ಆ್ಯಂಟಿಆಕ್ಸಿಡೆಂಟ್ ಗಳು ಇದ್ದು ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ ಬಹಳ ಮುಖ್ಯ. ಕರಬೂಜ ತಿನ್ನುವುದರಿಂದ ದೃಷ್ಟಿ ಸುಧಾರಿಸುತ್ತದೆ.
ಕರಬೂಜದ ಜ್ಯೂಸ್ ಸೇವನೆ ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ. ಲೈಕೋಪೀನ್ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ.
ಕರಬೂಜದಲ್ಲಿರುವ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಮೂತ್ರಪಿಂಡವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.
ಕರಬೂಜವನ್ನು ವಾರಕ್ಕೊಮ್ಮೆಯಾದರೂ ತಿನ್ನುವುದರಿಂದ ಲ್ಡ್ ಶುಗರ್ ಏರಪೇರಗುವುದಿಲ್ಲ. ಇದನ್ನು ನಿಯಮಿತವಾಗಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.