ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

Tue, 14 Jun 2022-2:36 pm,

ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. 

ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. 

ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಪತ್ನಿ ಜೊತೆಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ದೇವರ ದರ್ಶನ ಪಡೆದರು. 

ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಕೋವಿಂದ್‌ ಅವರಿಗೆ ಸಾಥ್‌ ನೀಡಿದರು. 

ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link