See Pics: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸ ಲೋಕ ಕಲ್ಯಾಣ್ ಮಾರ್ಗದಿಂದ ದೆಹಲಿಯಲ್ಲಿ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಸ್ವಾಗತಿಸಿದರು.

  • May 24, 2019, 09:06 AM IST

ನವದೆಹಲಿ: 2019 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯದ ಹಂತದತ್ತ ತಲುಪಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತಕರಲ್ಲಿ ಮಂದಹಾಸ ಮೂಡಿದೆ. ಗುರುವಾರ ಲೋಕಸಭಾ ಚುನಾವಣಾ ಫಲಿತಾಂಶಗಳು ಹೊರಬರುತ್ತಿದ್ದಂತೆ ದೇಶಾದ್ಯಂತ ಸಂಭ್ರಮಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸ ಲೋಕ ಕಲ್ಯಾಣ್ ಮಾರ್ಗದಿಂದ ದೆಹಲಿಯಲ್ಲಿ ಪಕ್ಷದ ಪ್ರಧಾನ ಕಚೇರಿಯನ್ನು ತಲುಪಿದಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಸ್ವಾಗತಿಸಿದರು.
 

1 /5

ಏತನ್ಮಧ್ಯೆ, ಬಿಜೆಪಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ಮೋದಿ-ಮೋದಿ ಕೂಗು ಮುಗಿಲು ಮುಟ್ಟಿತ್ತು. ಜೊತೆಗೆ ಜೈ ಶ್ರೀರಾಮ್ ಘೋಷಣೆಗಳು ಕೇಳಿ ಬಂದವು. ಈ ಸಂದರ್ಭ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ರಾಜ್ನಾಥ್ ಸಿಂಗ್ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಉಪಸ್ಥಿತರಿದ್ದರು.

2 /5

ಬಿಜೆಪಿ ಕಚೇರಿ ತಲುಪಿದ ಪ್ರಧಾನಿ ಮೋದಿ ಅವರನ್ನು ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು.

3 /5

4 /5

5 /5