Puneeth Rajkumar death anniversary: ‘ಅಪ್ಪು’ 2ನೇ ವರ್ಷದ ಪುಣ್ಯಸ್ಮರಣೆ ಹೇಗಿತ್ತು ನೋಡಿ

Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.

Puneeth Rajkumar Death Anniversary: ಇಂದು(ಅ.29) ಕರುನಾಡ ರಾಜಕುಮಾರ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳು ಸಮಾಧಿ ದರ್ಶನ ಪಡೆದು ಪುನೀತ್ ಸ್ಮರಣೆ ಮಾಡಿದ್ದಾರೆ. ಬೇರೆ ಬೇರೆ ಭಾಗಗಳಿಂದ ಬಂದಿದ್ದ ಅಭಿಮಾನಿಗಳಿಗಾಗಿ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ನಗುಮೊಗದ ರಾಜಕುಮಾರ ಡಾ.ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ಅಗಲಿ ಇಂದಿಗೆ 2 ವರ್ಷಗಳು ಕಳೆದಿವೆ. ಅಪ್ಪು 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಗುಲಾಬಿ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

2 /5

‘ಅಪ್ಪು’ 2ನೇ ಪುಣ್ಯಸ್ಮರಣೆ ಹಿನ್ನೆಲೆ ಭಾನುವಾರ ಬೆಳಗ್ಗೆಯಿಂದಲೇ ಲಕ್ಷಾಂತರ ಜನರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು. ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಿದರು.

3 /5

ಪುನೀತ್ ಸಮಾಧಿ ಜೊತೆಗೆ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿಗೂ ಅಲಂಕಾರ ಮಾಡಲಾಗಿತ್ತು. ಬೆಳ್ಳಂಬೆಳಗ್ಗೆಯಿಂದಲೇ ಅಭಿಮಾನಿಗಳು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ‘ಅಪ್ಪು’ ದರ್ಶನ ಪಡೆದುಕೊಂಡರು.

4 /5

‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.

5 /5

ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ‘ಅಪ್ಪು’ವಿನ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.