Puneeth Rajkumar death anniversary: ‘ಅಪ್ಪು’ 2ನೇ ವರ್ಷದ ಪುಣ್ಯಸ್ಮರಣೆ ಹೇಗಿತ್ತು ನೋಡಿ
ನಗುಮೊಗದ ರಾಜಕುಮಾರ ಡಾ.ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ಅಗಲಿ ಇಂದಿಗೆ 2 ವರ್ಷಗಳು ಕಳೆದಿವೆ. ಅಪ್ಪು 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಗುಲಾಬಿ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.
‘ಅಪ್ಪು’ 2ನೇ ಪುಣ್ಯಸ್ಮರಣೆ ಹಿನ್ನೆಲೆ ಭಾನುವಾರ ಬೆಳಗ್ಗೆಯಿಂದಲೇ ಲಕ್ಷಾಂತರ ಜನರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು. ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಿದರು.
ಪುನೀತ್ ಸಮಾಧಿ ಜೊತೆಗೆ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿಗೂ ಅಲಂಕಾರ ಮಾಡಲಾಗಿತ್ತು. ಬೆಳ್ಳಂಬೆಳಗ್ಗೆಯಿಂದಲೇ ಅಭಿಮಾನಿಗಳು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ‘ಅಪ್ಪು’ ದರ್ಶನ ಪಡೆದುಕೊಂಡರು.
‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ‘ಅಪ್ಪು’ವಿನ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.