Rahu Transit Effect 2023: 2023ರಲ್ಲಿ ಪಾಪಗ್ರಹ ರಾಹುವು ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದು, ಇದು ಕೆಲವು ರಾಶಿಯವರಿಗೆ ಅದ್ಭುತ ಪ್ರಯೋಜನಗಳನ್ನು ನೀಡಲಿದೆ. ಈ ಸಮಯದಲ್ಲಿ ಯಾವ ರಾಶಿಯವರಿಗೆ ಲಾಭವಾಗಲಿದೆ ತಿಳಿಯಿರಿ.
Rahu Transit Effect 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಗ್ರಹದ ಸ್ಥಾನದಲ್ಲಿನ ಸಣ್ಣ ಬದಲಾವಣೆಯೂ ಕೂಡ ಪ್ರತಿಯೊಬ್ಬರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮುಂದಿನ ವರ್ಷ ಅಂದರೆ 2023 ರಲ್ಲಿ ಅನೇಕ ಗ್ರಹಗಳು ತಮ್ಮ ರಾಶಿಚಕರ ಚಿಹ್ನೆಯನ್ನು ಬದಲಾಯಿಸಲಿವೆ. ಅವುಗಳಲ್ಲಿ ನೆರಳು ಗ್ರಹ ರಾಹು ಕೂಡ ಒಂದು. 2023ರ ಅಕ್ಟೋಬರ್ 30 ರಂದು ಪಾಪ ಗ್ರಹ ರಾಹುವು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ರಾಹುವು ಕೆಲವು ರಾಶಿಯವರ ಅದೃಷ್ಟದ ಬಾಗಿಲನ್ನೂ ತೆರೆಯಲಿದ್ದಾನೆ. ಆ ಅದೃಷ್ಟದ ರಾಶಿಯ್ಗಳು ಯಾವುವು ಎಂದು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇಷ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ಮೇಷ ರಾಶಿಯಲ್ಲಿ ಕುಳಿತಿರುವ ರಾಹು ಅಕ್ಟೋಬರ್ 30, 2023 ರಂದು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಅಂತಹ ಪರಿಸ್ಥಿತಿಯಲ್ಲಿ, ರಾಹುವಿನ ಈ ರಾಶಿ ಪರಿವರ್ತನೆಯು ಮೇಷ ರಾಶಿಯ ಜನರಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅಪಾರ ಯಶಸ್ಸನ್ನು ನೀಡಲಿದ್ದಾನೆ. ಈ ಅವಧಿಯಲ್ಲಿ ಮೇಷ ರಾಶಿಯ ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದೆ. ವ್ಯಾಪಾರಕ್ಕೆ ಸಂಬಂಧಿಸಿದ ಜನರು ಸಹ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ ಮತ್ತು ಆರ್ಥಿಕ ಪರಿಸ್ಥಿತಿಯು ಬಲಗೊಳ್ಳುತ್ತದೆ.
ಮಿಥುನ ರಾಶಿ: 2023ರಲ್ಲಿ ರಾಹು ಸಂಚಾರವು ಮಿಥುನ ರಾಶಿಯವರಿಗೆ ಬಹಳ ಫಲಪ್ರದವಾಗಲಿದೆ. ಈ ಸಮಯದಲ್ಲಿ, ನೀವು ಸಮಾಜದಲ್ಲಿ ಗೌರವವನ್ನು ಪಡೆಯುತ್ತೀರಿ. ಈ ಸಮಯದಲ್ಲಿ ಮಿಥುನ ರಾಶಿಯವರು ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುವರು. ಮಾತ್ರವಲ್ಲ, ಹೊಸ ಆರ್ಥಿಕ ಮೂಲಗಳು ಸೃಷ್ಟಿಯಾಗಲಿದ್ದು ಹಣಕಾಸಿನ ಸ್ಥಿತಿ ಬಲಗೊಳ್ಳಲಿದೆ. ವ್ಯಾಪಾರ-ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿರುವವರಿಗೆ ಇದು ಉತ್ತಮ ಸಮಯ. ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದೆ.
ಕರ್ಕಾಟಕ ರಾಶಿ: 2023ರಲ್ಲಿ ರಾಹು ರಾಶಿ ಪರಿವರ್ತನೆಯಿಂದ ಕರ್ಕಾಟಕ ರಾಶಿಯವರಿಗೆ ಬಂಪರ್ ಲಾಭವಾಗಲಿದೆ. ಈ ರಾಶಿಯವರಿಗೆ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ನಿಮ್ಮ ಇಷ್ಟು ದಿನಗಳ ಆರ್ಥಿಕ ಸಂಕಷ್ಟದಿಂದ ಹೊರಬರುವಿರಿ. ಹಠಾತ್ ವಿತ್ತೀಯ ಲಾಭದಿಂದ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಕಠಿಣ ಪರಿಶ್ರಮದ ಸಂಪೂರ್ಣ ಲಾಭ ದೊರೆಯಲಿದೆ.
ವೃಶ್ಚಿಕ ರಾಶಿ: 2023 ರ ಅಕ್ಟೋಬರ್ ತಿಂಗಳಲ್ಲಿ ರಾಹು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸುವುದರಿಂದ ವೃಶ್ಚಿಕ ರಾಶಿಯವರಿಗೆ ಅಪಾರ ಹಣದ ಪ್ರಯೋಜನವಾಗಲಿದೆ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳು ಲಭ್ಯವಾಗಲಿವೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಯಶಸ್ಸು. ನಿಮ್ಮ ಹೂಡಿಕೆಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
ಮೀನ ರಾಶಿ: ಹೊಸ ವರ್ಷದಲ್ಲಿ ರಾಹು ರಾಶಿ ಪರಿವರ್ತನೆಯು ಮೀನ ರಾಶಿಯವರಿಗೆ ವಿಶೇಷ ಫಲ ನೀಡಲಿದೆ. ಈ ಸಮಯದಲ್ಲಿ ಆರ್ಥಿಕ ಪ್ರಯೋಜನಗಳು ಲಭ್ಯವಾಗಲಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ರಾಶಿಯವರಿಗೆ ಈ ವರ್ಷ ಮುಟ್ಟಿದ್ದೆಲ್ಲಾ ಚಿನ್ನ ಎಂಬಂತ ಸ್ಥಿತಿ ಇರಲಿದೆ. ನಿಮೆಲ್ಲಾ ಕೆಲಸಗಳಿಗೂ ಕೌಟುಂಬಿಕ ಬೆಂಬಲ ದೊರೆಯಲಿದ್ದು ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗಲಿದೆ. ಸೂಚನೆ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.