ಬೀದರ್`ನಲ್ಲಿ ನಡೆದ ಜನದನಿ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ: Photos

Mon, 13 Aug 2018-7:42 pm,

ಕರ್ನಾಟಕದ ಬೀದರ್ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ 'ಜನದನಿ' ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿದ್ದರು. ಇವರೊಂದಿಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.  

ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ರಾಫೆಲ್ ಒಪ್ಪಂದದ ಬಗ್ಗೆ ಪ್ರಸ್ತಾಪಿಸಿದಾಗಲೂ ಪ್ರಧಾನಿ ಮೋದಿ ಅವರು ಒಂದು ಮಾತೂ ಆಡಲಿಲ್ಲ. ರಹಸ್ಯ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಜನರಿಗೆ ಸುಳ್ಳು ಹೇಳಿದರು. ಆದರೆ ಇದನ್ನು ಫ್ರಾನ್ಸ್ ಅಧ್ಯಕ್ಷರು ಅಲ್ಲಗಳೆದಿದ್ದಾರೆ. ಯುಪಿಎ ಸರ್ಕಾರ ಫ್ರಾನ್ಸ್ ನಿಂದ ಪ್ರತಿ ರಾಫೆಲ್ ಯುದ್ಧ ವಿಮಾನವನ್ನು ರೂ.565 ಕೋಟಿ ರೂ.ಗಳಿಗೆ ಕೊಳ್ಳುವ ಇಂಗಿತ ವ್ಯಕ್ತ ಪಡಿಸಿತ್ತು. ಆದರೆ, ಮೋದಿ ಸರ್ಕಾರ ಈಗ ರೂ. 1,600 ಕೋಟಿ ರೂ.ಗಳಿಗೆ ಕೊಳ್ಳಲು ಹೊರಟಿದೆ ಎಂದು ಆರೋಪಿಸಿದರು. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಚೌಕೀದಾರ ಅಲ್ಲ. ಭ್ರಷ್ಟಾಚಾರದ ಭಾಗೀದಾರ. ಅವರ ಕುಮ್ಮಕ್ಕಿನಿಂದಲೇ ದೇಶದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದಲ್ಲಿ ಅಭದ್ರತೆ, ಅಸುರಕ್ಷತೆ ಹೆಚ್ಚಾಗಿದೆ. ದಲಿತರು, ಮಹಿಳೆಯರ ಮೇಲೆ ಹಲ್ಲೆಗಳು ಹೆಚ್ಚಾಗಿವೆ. ಈ ದುರಾಚಾರವನ್ನು ನಾವು ಮೋದಿ ಸರ್ಕಾರದಿಂದ ನಿರೀಕ್ಷಿಸಿರಲಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.   

ಬೀದರ್ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link