ಮುಂದಿನ 2 ದಿನ ಈ ಭಾಗಗಳಲ್ಲಿ ಭರ್ಜರಿ ಮಳೆ: ಗುಡುಗು-ಸಿಡಿಲಿನ ಆರ್ಭಟ, ಬಿರುಗಾಳಿ ಜೊತೆ ಜಲಪ್ರವಾಹದ ಭೀತಿ
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೊಂದೆಡೆ ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ತುಮಕೂರು, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ ಮತ್ತು ಕೋಲಾರ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.