Raisin Water: ನಿತ್ಯ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿದರೆ ಈ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ
ಜೀವಸತ್ವಗಳು, ಆಹಾರದ ಫೈಬರ್ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಲ್ಲಿ ಹೇರಳವಾಗಿರುವ ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿಯುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಎಂದು ಹೇಳಲಾಗುತ್ತದೆ.
ನಿತ್ಯ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ದೇಹವನ್ನು ನಿರ್ವಿಷಗೊಳಿಸಲು ತುಂಬಾ ಪ್ರಯೋಜನಕಾರಿ ಆಗಿದೆ.
ಒಣದ್ರಾಕ್ಷಿ ನೀರಿನಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಒಣದ್ರಾಕ್ಷಿ ನೀರಿನಲ್ಲಿ ಆಂಟಾಸಿಡ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕಂಡುಬರುತ್ತದೆ. ಹಾಗಾಗಿ ನಿತ್ಯ ಮುಂಜಾನೆ ಒಣದ್ರಾಕ್ಷಿ ನೀರು ಕುಡಿಯುವುದರಿಂದ ಅಸಿಡಿಟಿ, ಗ್ಯಾಸ್ಟ್ರಿಕ್ ಸಮಸ್ಯೆಗಳಿಂದ ದೂರ ಉಳಿಯಬಹುದು ಎನ್ನಲಾಗುತ್ತದೆ.
ರಾತ್ರಿ ಒಣದ್ರಾಕ್ಷಿಯನ್ನು ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಆ ನೀರನ್ನು ಕುಡಿಯುವುದರಿಂದ ಯಕೃತ್ತಿನ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಒಣದ್ರಾಕ್ಷಿಯಲ್ಲಿ ಕಬ್ಬಿಣ, ಬಿ-ಕಾಂಪ್ಲೆಕ್ಸ್ ಜೀವಸತ್ವಗಳು ಮತ್ತು ತಾಮ್ರವು ಹೇರಳವಾಗಿ ಕಂಡುಬರುತ್ತದೆ. ಹಾಗಾಗಿ, ನಿತ್ಯ ಮುಂಜಾನೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ದೇಹದಲ್ಲಿ ರಕ್ತದ ಕೊರತೆಯನ್ನು ನೀಗಿಸುತ್ತದೆ.
ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ನೆನೆಸಿಟ್ಟ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕರ ತೂಕ ಇಳಿಕೆಯ ಜೊತೆಗೆ ಮೊಡವೆಯಂತಹ ಚರ್ಮ ಸಂಬಂಧಿತ ಸಮಸ್ಯೆಗಳಿಂದಲೂ ಪರಿಹಾರ ಪಡೆಯಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.