ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಇವರು ಒಂದು ಸಿನಿಮಾಗೆ ಪಡೆಯುವ ಸಂಭಾವನೆ…

Thu, 06 Jun 2024-3:07 pm,

ಭಾರತದ ಜನಪ್ರಿಯ ನಟ, ಬರಹಗಾರ, ನಿರ್ದೇಶಕ ಮತ್ತು ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೂನ್ 6, 1983ರಂದು ಉಡುಪಿಯಲ್ಲಿ ಜನಿಸಿದ ರಕ್ಷಿತ್, ಮನರಂಜನಾ ಉದ್ಯಮಕ್ಕೆ ಪ್ರವೇಶಿಸುವ ಮೊದಲು ಸಾಫ್ಟ್‌ವೇರ್ ವೃತ್ತಿಪರರಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು

ರಕ್ಷಿತ್ ಶೆಟ್ಟಿ ಹಲವಾರು ಹಿಟ್ ಚಲನಚಿತ್ರಗಳನ್ನು ನೀಡಿದ್ದು, ಉದ್ಯಮದಲ್ಲಿ ಅತ್ಯಂತ ಪ್ರತಿಭಾವಂತ ನಟರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ.

ಅಂದಹಾಗೆ ರಕ್ಷಿತ್ ಶೆಟ್ಟಿ ಅವರ ನಿವ್ವಳ ಮೌಲ್ಯ ಸುಮಾರು 3.5 ಕೋಟಿ ಎಂದು ಅಂದಾಜಿಸಲಾಗಿದೆ

‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’, ‘ಉಳಿದವರು ಕಂಡಂತೆ’ ಮತ್ತು ‘ಚಾರ್ಲಿ’ ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಪರಮ್ವಾಹ್ ಸ್ಟುಡಿಯೋಸ್ ಎಂಬ ನಿರ್ಮಾಣ ಕಂಪನಿಯನ್ನು ಸಹ ಇವರು ಹೊಂದಿದ್ದಾರೆ.

ರಕ್ಷಿತ್ ಶೆಟ್ಟಿ ಸರಳ ಜೀವನಶೈಲಿಗೆ ಹೆಸರುವಾಸಿ. ಇದೇ ಕಾರಣಕ್ಕೆ ಸ್ಯಾಂಡಲ್ವುಡ್’ನಲ್ಲಿ ಇವರನ್ನು ಸಿಂಪಲ್ ಸ್ಟಾರ್ ಎಂದೇ ಕರೆಯಲಾಗುತ್ತದೆ.

ರಕ್ಷಿತ್ ಶೆಟ್ಟಿ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ತಂದೆ ಕಿಶನ್ ಶೆಟ್ಟಿ ಉದ್ಯಮಿ, ತಾಯಿ ಕುಮುದಾ ಶೆಟ್ಟಿ ಗೃಹಿಣಿ.

ಇನ್ನು ರಕ್ಷಿತ್ ಶೆಟ್ಟಿ ಪ್ರತಿ ಚಿತ್ರಕ್ಕೆ ಅಂದಾಜು 5 ರಿಂದ 10 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link