Ramoji Rao: ಚಿರ ನಿದ್ರೆಗೆ ಜಾರಿದ ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್.. ರಾಮೋಜಿ ಗ್ರೂಪ್ ಸಂಸ್ಥಾಪಕ ಇನ್ನು ನೆನಪು ಮಾತ್ರ
ರಾಮೋಜಿ ಗ್ರೂಪ್ ಮತ್ತು ಈಟಿವಿ ನೆಟ್‌ವರ್ಕ್ ಸಂಸ್ಥಾಪಕ ರಾಮೋಜಿ ರಾವ್ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಜೂನ್ 05ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗಿನ ಜಾವ 4:50ಕ್ಕೆ ರಾಮೋಜಿ ರಾವ್ ಕೊನೆಯುಸಿರೆಳೆದಿದ್ದಾರೆ.
ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಸಾಗಿಸಲು ಸಿದ್ಧತೆಗಳು ನಡೆಯುತ್ತಿವೆ.
ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿದುಬಂದಿದೆ.