ಪುಷ್ಪ2 ಸಕ್ಸಸ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಎಂಗೇಜ್‌ಮೆಂಟ್ ಫೋಟೋಸ್ ವೈರಲ್!
Rashmika Mandanna engagement Photos: ಪುಷ್ಪ 2 ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಬರೆಯುತ್ತಿದೆ. 1000 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.
ವಿಜಯ್ ದೇವರಕೊಂಡ ಜೊತೆಗೆ ರಶ್ಮಿಕಾ ಮಂದಣ್ಣ ಡೇಟಿಂಗ್ ವದಂತಿ ಹಬ್ಬುತ್ತಿದೆ. ಈ ಮಧ್ಯೆ ಇಬ್ಬರೂ ತಾವು ಸಿಂಗಲ್ ಅಲ್ಲ ಎಂದು ಹೇಳಿದ್ದಾರೆ. ಈ ಎಲ್ಲದರ ನಡುವೆ ಇದೀಗ ರಶ್ಮಿಕಾ ಮಂದಣ್ಣ ಎಂಗೇಜ್‌ಮೆಂಟ್ ಫೋಟೋ ವೈರಲ್ ಆಗುತ್ತಿದೆ.
ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ರಶ್ಮಿಕಾ ಜೀವನದಲ್ಲಿ ಹಲವು ವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ ಅವರನ್ನು ಪ್ರೀತಿಸಿದ್ದರು. ಇವರ ಮದುವೆ ಕೂಡ ಫಿಕ್ಸ್ ಆಗಿತ್ತು.
ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥದ ಸಮಯದಲ್ಲಿ ರಶ್ಮಿಕಾ ಕೇವಲ 21 ವರ್ಷ ವಯಸ್ಸಿನವರಾಗಿದ್ದರು.
ಕಿರಿಕ್ ಪಾರ್ಟಿ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟರು. ಚಿತ್ರರಂಗಕ್ಕೆ ಪ್ರವೇಶಿಸಿದ ತಕ್ಷಣ ನಿಶ್ಚಿತಾರ್ಥ ಮಾಡಿಕೊಂಡರು.
ರಕ್ಷಿತ್ ಶೆಟ್ಟಿ ಅವರಿಗಿಂತ ರಶ್ಮಿಕಾ 13 ವರ್ಷ ಚಿಕ್ಕವರಾಗಿದ್ದರು. ಇವರಿಬ್ಬರ ನಿಶ್ಚಿತಾರ್ಥದ ಸುದ್ದಿ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.
ಅವರ ಸಂಬಂಧದ ಕೇವಲ 12 ತಿಂಗಳೊಳಗೆ ಮುರಿದು ಹೋಯಿತು. ಇಬ್ಬರ ನಡುವೆ ಭಿನ್ನಾಭಿಪ್ರಾಯ ಪ್ರಾರಂಭವಾಯಿತು. ತಮ್ಮ ಸಂಬಂಧವನ್ನು ಕೊನೆಗೊಳಿಸಿದರು.