ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡ ರಶ್ಮಿಕಾ..ಖಂಡಿತಾ ಇದು ವಿಜಯ್ ದೇವರಕೊಂಡ ಅವರಿಗಾಗಿಯೇ ಎಂದು ನೆಟ್ಟಿಗರ ವಾದ..!
Rashmika Mandanna: ನ್ಯಾಶನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಭಾರಿ ಸದ್ದು ಮಾಡುತ್ತಿದ್ದಾರೆ. ಸೌತ್ ಅಷ್ಟೇ ಅಲ್ಲದೆ ಈಗ ಅವರು ಬಾಲಿವುಡ್‌ನಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಅಭಿನಯದ ಅನಿಮಲ್ ಚಿತ್ರ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್ ಹಿಟ್ ಆಗಿ ಬಾಕ್ಸ್ ಆಫಿಸ್‌ನಲ್ಲಿ ಧೂಳ್ ಎಬ್ಬಿಸಿತ್ತು.
ಸಿನಿಮಾಗಳ ಹೊರತಾಗಿ ರಶ್ಮಿಕಾ ಮಂದಣ್ಣ ತಮ್ಮ ಲವ್ ಲೈಫ್ ಕುರಿತಂತೆಯೂ ಸದಾ ಸುದ್ದಿಯಲ್ಲಿರುತ್ತಾರೆ. ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಬಹುಕಾಲದಿಂದ ಹರಿದಾಡುತ್ತಿದೆ.
ಇಬ್ಬರೂ ಆಗಾಗ ವಿದೇಶ ಪ್ರವಾಸ ಮಾಡುತ್ತಿರುತ್ತಾರೆ ಎನ್ನುವ ಕುರಿತಾದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹಾಗಾಗ ವೈರಲ್ ಆಗುತ್ತಿರುತ್ತದೆ. ಈ ನಡುವೆ ನಟಿ ರಶ್ಮಿಕಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಾಕಿರುವ ಪೋಸ್ಟ್ ಒಂದು ಭಾರಿ ವೈರಲ್ ಆಗುತ್ತಿದೆ.
"ನನ್ನ ಜೀವನದಲ್ಲಿ ಬಂದಿದ್ದಕ್ಕೆ ಧನ್ಯವಾದಗಳು" ಎಂದು ರಶ್ಮಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು, ಈ ಪೋಸ್ಟ್ ವಿಜಯ್ ದೇವರಕೊಂಡ ಅವರಿಗಾಗಿ ರಶ್ಮಿಕಾ ಪ್ರೀತಿಯಿಂದ ಹಾಕಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಇತ್ತೀಚೆಗಷ್ಟೇ ಅನಿಮಲ್ ಸಿನಿಮಾದ ಪ್ರಚಾರದ ವೇಳೆ ರಶ್ಮಿಕಾ ಮಂದಣ್ಣ ಅವರು ಬಾಲಯ್ಯ ಕಾರ್ಯಕ್ರಮಕ್ಕೆ ವಿಜಯ್ ಅವರನ್ನು ಕರೆಸಿದ್ದು, ಇಬ್ಬರ ನಡುವೆ ಪ್ರೀತಿ ಇರುವುದು ಖಚಿತ ಎಂಬ ಮಾತುಗಳು ಕೇಳಿಬಂದಿತ್ತು.
ಕನ್ನಡದ ಕಿರಾಕ್ ಪಾರ್ಟಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್, ಕಾಲಿವುಡ್, ಬಾಲಿವುಡ್ ಇಂಡಸ್ಟ್ರಿಯಲ್ಲಿ ಫುಲ್ ಡಿಮ್ಯಾಂಡ್ ಹೊಂದಿರುವ ನಟಿ.