Ration Card Update : ಪಡಿತರ ಚೀಟಿದಾರರ ಗಮನಕ್ಕೆ : ಪಡಿತರ ತೆಗೆದುಕೊಳ್ಳುವ ನಿಯಮದಲ್ಲಿ ಭಾರಿ ಬದಲಾವಣೆ!
ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆ : ಇಲ್ಲಿಯವರೆಗೆ ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 32 ರಾಜ್ಯಗಳಲ್ಲಿ 'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್ (ONORC) ಯೋಜನೆ'ಯನ್ನು ಜಾರಿಗೊಳಿಸಲಾಗಿದೆ. ಕೋಟಿಗಟ್ಟಲೆ ಫಲಾನುಭವಿಗಳು ಅಂದರೆ NFSA ಅಡಿಯಲ್ಲಿ ಬರುವ ಜನಸಂಖ್ಯೆಯ ಶೇ.86 ರಷ್ಟು ಜನ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಪ್ರತಿ ತಿಂಗಳು ಸುಮಾರು 1.5 ಕೋಟಿ ಜನರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆರಳುವ ಮೂಲಕ ಪ್ರಯೋಜನ ಪಡೆಯುತ್ತಿದ್ದಾರೆ. ಸರ್ಕಾರವು ಜನರಿಗೆ ಸಹಾಯ ಮಾಡಲು ಉಚಿತ ಪಡಿತರ ಯೋಜನೆಯನ್ನು ಹೆಚ್ಚಿಸಿದೆ.
ರಾಜ್ಯ ಸರ್ಕಾರಗಳು ನೀಡಿರುವ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಾನದಂಡಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮಗೊಳಿಸಿ ಜರಿ ಮಾಡಲಿದೆ.
ಮಾನದಂಡಗಳು ಏಕೆ ಬದಲಾಗುತ್ತಿವೆ? : ಪಡಿತರವನ್ನು ನಕಲಿ ರೀತಿಯಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿರುವವರು ದೇಶದಲ್ಲಿ ಅನೇಕರಿದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ (NFSA) ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಅವರಲ್ಲಿ ಆರ್ಥಿಕವಾಗಿ ಸಮೃದ್ಧವಾಗಿರುವ ಅನೇಕ ಜನರಿದ್ದಾರೆ. ಈ ಕಾರಣಕ್ಕಾಗಿಯೇ ಈಗ ಸರ್ಕಾರ ತನ್ನ ನಿಯಮಗಳನ್ನು ಬದಲಾಯಿಸಲು ಹೊರಟಿದೆ. ಹೊಸ ಮಾನದಂಡದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಸಂಪೂರ್ಣ ಪಾರದರ್ಶಕಗೊಳಿಸಲು ನಿಯಮಗಳನ್ನು ಬದಲಾವಣೆ ಮಾಡಲು ಹೊರಟಿದೆ.
ಇದರ ಅಡಿಯಲ್ಲಿ, ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು ತೆಗೆದುಕೊಳ್ಳುವ ಅರ್ಹರಿಗೆ ನಿಗದಿಪಡಿಸಿದ ಮಾನದಂಡಗಳನ್ನು ಬದಲಾವಣೆ ಮಾಡುತ್ತಿದೆ. ಹೊಸ ಮಾನದಂಡದ ಕರಡು ಈಗ ಬಹುತೇಕ ಸಿದ್ಧವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳೊಂದಿಗೆ ಸಭೆ ನಡೆಸುವ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಹೊಸ ಮಾನದಂಡಗಳ ಬಗ್ಗೆ ಮಾಹಿತಿ ಇಲ್ಲಿದೆ.