ಕೇವಲ ಇಂಧನ ಬೆಲೆ ಮಾತ್ರವಲ್ಲ ಈ ಎಲ್ಲಾ ಕಾರಣಗಳಿಗಾಗಿ ಎಲೆಕ್ಟ್ರಿಕ್ ವಾಹನ ಖರೀದಿ ಸರಿಯಾದ ಆಯ್ಕೆ

 ಇಂಧನ ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ನವದೆಹಲಿ  : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ,  ವಾಹನವನ್ನು ನಿರ್ವಹಿಸುವುದು ನಿಜವಾಗಿಯೂ ಸವಾಲಿನ ಸಂಗತಿ. ಇಂಧನ ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನ ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ,  ಎಲೆಕ್ಟ್ರಿಕ್ ವಾಹನ ಖರೀದಿಸಲು ಇದೊಂದೇ ಕಾರಣವೇ? ಅಲ್ಲ, ಎಲೆಕ್ಟ್ರಿಕ್ ವಾಹನ ಖರೀದಿ ಮಾಡಲು ಇದೊಂದೇ ಕಾರಣವಲ್ಲ ಎನ್ನುತ್ತಾರೆ ಟಾಟಾ ಮೋಟಾರ್ಸ್. ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕಂಪನಿಯು ಇದಕ್ಕೆ ಇತರ ಕಾರಣಗಳನ್ನು ಸಹ ನೀಡಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಎಲೆಕ್ಟ್ರಿಕ್ ವಾಹನಗಳು ಇತ್ತೀಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಈ  ಕಂಪನಿಗಳು ಭದ್ರತೆಯ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. 

2 /5

ಎಲೆಕ್ಟ್ರಿಕ್ ವಾಹನವನ್ನು ಖರೀದಿಸಿದಾಗ, ಸರ್ಕಾರವು ಆ ವಾಹನದ ಮೇಲೆ ಸಬ್ಸಿಡಿ ನೀಡುತ್ತದೆ. ಇದರಿಂದ ಕಡಿಮೆ ಹಣದಲ್ಲಿ ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಸೌಲಭ್ಯವನ್ನು ಪಡೆಯಬಹುದು. 

3 /5

ಈಗ ಎಲೆಕ್ಟ್ರಿಕ್ ವಾಹನಗಳು ತುಂಬಾ ಶಕ್ತಿಯುತವಾಗಿ ಬರಲು ಪ್ರಾರಂಭಿಸಿವೆ.  ಈ ವಾಹನಗಲ್ಲಿ  ದೀರ್ಘ ಪ್ರಯಾಣವನ್ನು ಕೂಡಾ ಮಾಡಬಹುದು. 

4 /5

ಎಲೆಕ್ಟ್ರಿಕ್ ವಾಹನವನ್ನು ಚಾರ್ಜ್ ಮಾಡುವ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ  ಚಾರ್ಜಿಂಗ್ ಸ್ಟೇಷನ್‌ ಸಂಖ್ಯೆಯಲ್ಲಿ ಹೆಚ್ಚಳ  ಕಂಡು ಬರುತ್ತಿದೆ. ಮುಂಬರುವ ದಿನಗಳಲ್ಲಿ ಈ  ನೆಟ್‌ವರ್ಕ್ ಇನ್ನು ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ.       

5 /5

ಇಂಧನ ವೆಚ್ಚವನ್ನು ಉಳಿಸುವುದರ ಜೊತೆಗೆ, ಎಲೆಕ್ಟ್ರಿಕ್ ವಾಹನಗಳಲ್ಲಿ ಹೊಸ ತಂತ್ರಜ್ಞಾನವನ್ನು ಪಡೆಯಬಹುದು. ಉತ್ತಮ ಚಾಲನಾ ಗುಣಮಟ್ಟ ಸಿಗುತ್ತದೆ.