ಬಿ.ದಯಾನಂದ್ ಹೇಳಿದ್ದೇನು?

  • Aug 24, 2024, 13:37 PM IST
1 /6

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಚಿತ್ರರಂಗದ ಅನೇಕ ಆಪ್ತರು ಅವರನ್ನು ಭೇಟಿ ಮಾಡಿದ್ದಾರೆ. ಇತ್ತೀಚೆಗಷ್ಟೇ ನಟಿ ರಕ್ಷಿತಾ, ಪ್ರೇಮ್ ದಂಪತಿ ಹಾಗೂ ನಟಿ ರಚಿತಾ ರಾಮ್‌ ಭೇಟಿ ಮಾಡಿ ದರ್ಶನ್‌ ಆರೋಗ್ಯ ವಿಚಾರಿಸಿದ್ದಾರೆ. 

2 /6

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ದರ್ಶನ್​ ಮೇಲಿದೆ. ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ ಅವರನ್ನು ಭೇಟಿ ಮಾಡಿರುವ ಅನೇಕ ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಇದೇ ಪ್ರಕರಣದಲ್ಲಿ ಚಿಕ್ಕಣ್ಣ ಮುಂತಾದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. 

3 /6

ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಹೇಳಿಕೆ ನೀಡಿರುವವರು ಕೂಡ ದರ್ಶನ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.‌ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ.

4 /6

‘ಆ ವಿಷಯ ನಮ್ಮ ಪರಿಶೀಲನೆಯಲ್ಲಿದೆ. ಕಾನೂನಾತ್ಮಕವಾಗಿ ಪರಿಶೀಲಿಸಿ ಆ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಯಾವ ರೀತಿ ಮಾಡುತ್ತೇವೆ ಎಂಬುದನ್ನು ಇಲ್ಲಿ ಹೇಳುವುದು ಕಷ್ಟ ಅಂತಾ ಬಿ.ದಯಾನಂದ್‌ ತಿಳಿಸಿದ್ದಾರೆ. 

5 /6

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.

6 /6

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್​ ಅಂಡ್‌ ಗ್ಯಾಂಗ್ ಜೈಲು ಪಾಲಾಗಿದೆ.