Republic Day 2022: ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾದ ಕರ್ನಾಟಕದ ಸ್ತಬ್ಧಚಿತ್ರ
ಈ ಬಾರಿಯ ಗಣರಾಜ್ಯೋತ್ಸವದಲ್ಲಿ 'ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯದಡಿಯಲ್ಲಿ ಕರ್ನಾಟಕದ ಪಾರಂಪರಿಕ ಕಲೆಯು ಅನಾವರಣಗೊಳ್ಳಲಿದೆ.
ವಿಶ್ವಪ್ರಸಿದ್ಧ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್ ಇರುವ ರಾಜ್ಯದ 16 ಕರಕುಶಲ ವಸ್ತುಗಳು(Handicrafts) ಅನಾವರಣಗೊಳ್ಳಲಿವೆ.
ಕರ್ನಾಟಕದ ಕರಕುಶಲ ಕಲೆ(Handicrafts Tableau)ಗಳನ್ನು ಬಿಂಬಿಸುವ ಸ್ತಬ್ಧಚಿತ್ರ ಗಣರಾಜೋತ್ಸವ(Republic Day Parade)ದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಇದಾಗಿದೆ.
ಸತತ 13ನೇ ವರ್ಷವೂ ಕರ್ನಾಟಕ ಟ್ಯಾಬ್ಲೋ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ.
ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾದ ಕರ್ನಾಟಕದ ಸ್ತಬ್ಧಚಿತ್ರ.