ಅನ್ನ ಬೇಯುವಾಗ ಇದನ್ನು ಬೆರೆಸಿ: ಯಾವ ಪಥ್ಯವೂ ಇಲ್ಲದೆ ಬ್ಲಡ್ ಶುಗರ್’ನ್ನು ಸಂಪೂರ್ಣ ಕಂಟ್ರೋಲ್ ಮಾಡಬಹುದು
ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಅಕ್ಕಿ ಬೇಯಿಸಿದ ನೀರು ಪ್ರಯೋಜನಕಾರಿ. ಈ ನೀರು ಬ್ಲಡ್ ಶುಗರ್ ಜೊತೆ ತೂಕ ಕೂಡ ಕಡಿಮೆ ಮಾಡಲು ಉಪಯುಕ್ತವಾಗಿದೆ.
ಅನ್ನ ಬೇಯುವಾಗ ತೆಗೆದಿಟ್ಟ ನೀರು ದೇಹದ ಶಕ್ತಿಯನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಇದು ಅನೇಕ ಜನರ ಆಹಾರದಲ್ಲಿ ಇದು ಪ್ರಮುಖ ಸ್ಥಾನವನ್ನು ಪಡೆದಿದೆ.
ದೇಹವನ್ನು ಹೈಡ್ರೇಟ್ ಆಗಿ ಇಡುವುದು ಅತಿ ಮುಖ್ಯ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಇದು ಇನ್ನಷ್ಟು ಮುಖ್ಯವಾಗುತ್ತದೆ. ಎಲ್ಲಾ ದೈಹಿಕ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಜಲಸಂಚಯನವು ಪ್ರಮುಖ ಪಾತ್ರ ವಹಿಸುತ್ತದೆ. ಹೀಗಿರುವಾಗ ಅಕ್ಕಿ ನೀರು ನಿಮ್ಮನ್ನು ಹೈಡ್ರೀಕರಿಸುವಲ್ಲಿ ಸಹಾಯ ಮಾಡುತ್ತದೆ.
ಇನ್ನು ಗಂಜಿ ತೆಗೆದು ಅದಕ್ಕೆ ಚಿಟಿಕೆಯಷ್ಟು ಉಪ್ಪು ಮತ್ತು ಅರ್ಧ ಚಮಚ ತೆಂಗಿನೆಣ್ಣೆ ಬೆರೆಸಿ ಕುಡಿದರೆ ಮಧುಮೇಹಿಗಳಿಗೆ ಬಲು ಉಪಯುಕ್ತ. ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಗಂಜಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.