In Pics : ಸೈಕಲ್ ಏರಿ ಇಂಧನ ಬೆಲೆ ಹೆಚ್ಚಳ ವಿರುದ್ಧ ರಾಹುಲ್ ಗಾಂಧಿ ಪ್ರತಿಭಟನೆ

   

  • May 07, 2018, 20:32 PM IST
1 /5

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಯದಲ್ಲಿ ಪ್ರಚಾರದಲ್ಲಿ ತೊಡಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ ಮೋದಿ ಸರ್ಕಾರದ ಇಂಧನ ಬೆಲೆ ಹೆಚ್ಚಳವನ್ನು ವಿರೋಧಿಸಿ ಸೋಮವಾರ ಕೋಲಾರದಲ್ಲಿ ಸೈಕಲ್ ಏರಿ ಪ್ರತಿಭಟನೆ ನಡೆಸಿದರು.

2 /5

ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 10 ಲಕ್ಷ ಕೋಟಿ ರೂ.ಗಳನ್ನು ತೆರಿಗೆಯಾಗಿ ಸಂಗ್ರಹಿಸಿರುವ ಕೇಂದ್ರ ಸರ್ಕಾರ ದೇಶದ ಜನತೆಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ರಾಹುಲ್ ಆರೋಪಿಸಿದರು.

3 /5

ಅಷ್ಟೇ ಅಲ್ಲದೆ, ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಪ್ರತಿಭಟಿಸಿದ್ದ ಹಲವು ಬಿಜೆಪಿ ಮುಖಂಡರ ವೀಡಿಯೊವನ್ನು ಟ್ವೀಟರ್'ನಲ್ಲಿ ಅಪ್ ಲೋಡ್ ಮಾಡಿರುವ ರಾಹುಲ್ ಗಾಂಧಿ, ಇದೀಗ ಮೋದಿ ಸರ್ಕಾರ ಇಂಧನ ಬೆಲೆ ಹೆಚ್ಚಳ ಮಾಡಿರುವ ಕುರಿತು ಬಿಜೆಪಿ ನಾಯಕರು ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದರು.

4 /5

ಬಿಜೆಪಿ ಸರ್ಕಾರ ಇಂಧನ ಬೆಲೆ ಹೆಚ್ಚಳದ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿದ್ದರೂ, ಮೋದಿ ಸರ್ಕಾರ ನೀಡಿದ್ದ 'ಅಚ್ಚೇ ದಿನ್' ಭರವಸೆ ಸಂಬಂಧ ಈಗ ಮೌನ ವಹಿಸಿರುವುದೇಕೆ ಎಂದು ರಾಹುಲ್ ವಾಗ್ದಾಳಿ ನಡೆಸಿದರು. 

5 /5

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಗ್ಯುದ್ಧವೇ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚುನಾವಣೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಮೇ 12ರಂದು ಮತದಾನ ನಡೆಯಲಿದೆ. ಮೇ 15ರಂದು ಫಲಿತಾಂಶ ಹೊರಬೀಳಲಿದೆ.