ಬೆಂಕಿ ಬ್ಯಾಟ್ಸ್‌ಮನ್‌ ರಿಂಕು ಸಿಂಗ್‌ ಮದುವೆ ಪೋಸ್ಟ್ ಫೋನ್‌: ವಿವಾಹ ರದ್ದಾಗಿದ್ದಕ್ಕೆ ಇಲ್ಲಿದೆ ನೋಡಿ ಅಸಲಿ ಕಾರಣ!!

Rinku Singh-Priya saroj marriage postponed: ನವೆಂಬರ್ 19 ರಂದು ನಡೆಯಬೇಕಿದ್ದ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟರ್‌ ರಿಂಕು ಸಿಂಗ್‌ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ವಿವಾಹವನ್ನ ಮುಂದೂಡಲಾಗಿದೆ. ಇತ್ತೀಚೆಗಷ್ಟೇ ಈ ಜೋಡಿ ನಗುನಗುತ್ತಲೇ ಪರಸ್ಪರ ಉಂಗುರ ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅಂದಕೊಂಡಂತೆ ಆಗಿದ್ದರೆ ಇದೇ ನವೆಂಬರ್ 19ರಂದು ವಾರಣಾಸಿಯ ತಾಜ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಮದುವೆ ನಡೆಯಬೇಕಿತ್ತು. ಆದರೆ ಇದೀಗ ಮದುವೆ ಮುಂದೂಡಿಕೆಯಾಗಿದೆ. ಇದಕ್ಕೆ ಅಸಲಿ ಕಾರಣ ಇಲ್ಲಿದೆ ನೋಡಿ...

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /5

ಐಪಿಎಲ್‌ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ಪರ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್‌ ಮದುವೆ‌ ಸದ್ಯಕ್ಕೆ ರದ್ದಾಗಿದೆ. ಉತ್ತರ ಪ್ರದೇಶದ ಜೌನ್‌ಪುರದ ಮಚ್ಲಿಶಹರ್‌ನ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಜೊತೆಗೆ ಇದೇ ನವೆಂಬರ್ 18ರಂದು ವಾರಣಾಸಿಯಲ್ಲಿ ವಿವಾಹ ನಡೆಯಬೇಕಿತ್ತು. ಆದರೆ ಇದೀಗ ಈ ಮದುವೆ ಕೆಲ ತಿಂಗಳುಗಳ ಕಾಲ ಪೋಸ್ಟ್‌ಫೋನ್‌ ಆಗಿದೆ. ಇದಕ್ಕೆ ಕಾರಣವೇನು ಅನ್ನೋ ವಿಷಯ ಇದೀಗ ಬಹಿರಂಗವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

2 /5

ಕ್ರಿಕೆಟಿಗ ರಿಂಕು ಸಿಂಗ್‌ ಹಾಗೂ ಪ್ರಿಯಾ ಸರೋಜ್ ಅವರ ಅದ್ದೂರಿ ವಿವಾಹಕ್ಕಾಗಿ ವಾರಣಾಸಿಯ ನಾಡೇಸರ್‌ನಲ್ಲಿರುವ ಹೋಟೆಲ್ ತಾಜ್‌ ಅನ್ನು ಬುಕ್‌ ಮಾಡಲಾಗಿತ್ತು. ಜೂನ್ 8ರಂದು ಲಕ್ನೋದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿಯ ಮದುವೆಯನ್ನು ನವೆಂಬರ್ 19ರಂದು ವಾರಣಾಸಿಯ ತಾಜ್ ಹೋಟೆಲ್‌ನಲ್ಲಿ ನಡೆಸಲು ಕುಟುಂಬ ನಿರ್ಧರಿಸಿತ್ತು. ಆದರೆ ಭಾರತೀಯ ಕ್ರಿಕೆಟ್ ತಂಡಕ್ಕಾಗಿ ರಿಂಕು ಅವರ ಮದುವೆಯನ್ನ ಮುಂದೂಡಲಾಗಿದೆ. ರಿಂಕು ಸಿಂಗ್‌ ಅವರಿಗೆ ಕ್ರಿಕೆಟ್‌ನಲ್ಲಿ ಬಿಡುವು ಸಿಗದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

3 /5

ಮಾಹಿತಿ ಪ್ರಕಾರ, ರಿಂಕು ಸಿಂಗ್ ಅವರು ದೇಶೀಯ ಕ್ರಿಕೆಟ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ದರಿಂದ ಅವರ ಮದುವೆಯನ್ನ ಮುಂದೂಡಿಕೆ ಮಾಡಲಾಗಿದೆ. ಮದುವೆಗಂತಲೇ ಹೋಟೆಲ್ ಬುಕ್ಕಿಂಗ್‌ ಸಹ ರದ್ದುಪಡಿಸಲಾಗಿದೆಯಂತೆ. 2026ರ ಫೆಬ್ರುವರಿ ತಿಂಗಳಿನಲ್ಲಿ ಮದುವೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎರಡೂ ಕುಟುಂಬದವರು ಮತ್ತೆ ವಿವಾಹದ ದಿನಾಂಕವನ್ನ ನಿರ್ಧರಿಸಲಿವೆ ಎಂದು ಹೇಳಲಾಗಿದೆ. ನಿಖರ ದಿನಾಂಕವನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಅಂತಾ ವರದಿಯಾಗಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ದೃಢೀಕರಣ ಸಿಕ್ಕಿಲ್ಲ. 

4 /5

ರಿಂಕು ಸಿಂಗ್-ಪ್ರಿಯಾ ಸರೋಜ್ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಹಲವು ಸ್ಟಾರ್ ಕ್ರಿಕೆಟಿಗರು ಮತ್ತು ರಾಜಕೀಯ ನಾಯಕರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪ್ರಿಯಾ ಸರೋಜ್ ಭಾವುಕರಾಗಿದ್ದ ವಿಡಿಯೋ ಸೋಷಿಯಲ್‌‌ ಮೀಡಿಯಾದಲ್ಲಿ ಸಖತ್ ವೈರಲ್‌ ಆಗಿತ್ತು. ನಿಶ್ಚಿತಾರ್ಥದ ಈ ವಿಶೇಷ ಸಂದರ್ಭಕ್ಕೆ ಮತ್ತಷ್ಟು ಮೆರಗು ನೀಡಲು ರಿಂಕು ಹಾಗೂ ಪ್ರಿಯಾ ಪರಸ್ಪರ ವಿಶೇಷ ಉಂಗುರಗಳನ್ನ ಆರ್ಡರ್ ಮಾಡಿದ್ದರು. ಪ್ರಿಯಾ ಕೋಲ್ಕತ್ತಾದಿಂದ ತಮ್ಮ ಆಯ್ಕೆಯ ಡಿಸೈನರ್ ಉಂಗುರ ಖರೀದಿಸಿದ್ದರೆ, ರಿಂಕು ಮುಂಬೈನಿಂದ ವಿಶೇಷ ಉಂಗುರವನ್ನ ಆರ್ಡರ್ ಮಾಡಿದರು.    

5 /5

ಅಕ್ಟೋಬರ್ 19ರಿಂದ ನವೆಂಬರ್ 8ರ ವರೆಗೆ ಆಸ್ಟ್ರೇಲಿಯಾದಲ್ಲಿ 3 ಏಕದಿನ ಅಂತಾರಾಷ್ಟ್ರೀಯ ಪಂದ್ಯ ಮತ್ತು ಐದು ಟಿ-20 ಪಂದ್ಯದ ವೇಳಾಪಟ್ಟಿಯನ್ನ ಬಿಸಿಸಿಐ ಬಿಡುಗಡೆಗೊಳಿಸಿದೆ. ನವೆಂಬರ್ 14ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಟೆಸ್ಟ್ ಪಂದ್ಯ, ನವೆಂಬರ್ 30ರಿಂದ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿವೆ. ಆದ್ದರಿಂದ ರಿಂಕು ಸಿಂಗ್ ವಿವಾಹದ ದಿನಾಂಕವನ್ನ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 27 ವರ್ಷದ ರಿಂಕು ಸಿಂಗ್ ಭಾರತದ ಪರ ಇಲ್ಲಿವರೆಗೂ ಎರಡು ಏಕದಿನ ಅಂತಾರಾಷ್ಟ್ರೀಯ ಮತ್ತು 33 ಟಿ-20 ಪಂದ್ಯಗಳನ್ನ ಆಡಿದ್ದಾರೆ.