Health Tips: ವೈರಲ್ ಸೋಂಕಿನಿಂದ ಪಾರಾಗಲು ಈ 5 ಆರೋಗ್ಯ ವಿಧಾನ ಪಾಲಿಸಿರಿ
ಕನಿಷ್ಠ 20 ಸೆಕೆಂಡುಗಳ ಕಾಲ ಸೋಪ್ ಮತ್ತು ನೀರಿನಿಂದ ಕೈಗಳನ್ನು ತೊಳೆಯಿರಿ. ವಿಶೇಷವಾಗಿ ಶೌಚಾಲಯ ಬಳಸಿದ ನಂತರ ಆಹಾರ ಸೇವಿಸುವ ಮೊದಲು ಮತ್ತು ಅನಾರೋಗ್ಯದ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಕೈತೊಳೆಯುವುದನ್ನು ಮರೆಯಬೇಡಿ.
ನೀವು ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು ಉತ್ತಮ. ಇಲ್ಲದಿದ್ದರೆ ನಿಮ್ಮ ಸೀನುಗಳಿಂದ ಹೊರಬರುವ ಸೂಕ್ಷ್ಮಜೀವಿಗಳು ಪರಿಸರಕ್ಕೆ ಸೇರಿ ಬೇರೆಯವರಿಗೆ ಸಂಕಷ್ಟ ತಂದೊಡ್ಡಬಹುದು.
ನಿಮ್ಮ ಆಹಾರದಲ್ಲಿ ಸಾಕಷ್ಟು ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ಸೇರಿಸಿಕೊಳ್ಳಿರಿ. ಈ ಆಹಾರಗಳು ನಿಮಗೆ ಆರೋಗ್ಯವಾಗಿರಲು ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ದಿನವಿಡೀ ಕನಿಷ್ಠ 8-10 ಗ್ಲಾಸ್ ನೀರನ್ನು ಕುಡಿಯುವುದನ್ನು ರೂಢಿಸಿಕೊಳ್ಳಿರಿ. ನೀರು ನಿಮ್ಮ ದೇಹವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ ಮತ್ತು ವೈರಲ್ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಅಲ್ಲದೆ ಸಾಕಷ್ಟು ನಿದ್ರೆ ನಿಮ್ಮ ದೇಹವನ್ನು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.