IND vs SL: ಟಿ20 ವಿಶ್ವಕಪ್ ನಂತರ ಮತ್ತೆ ಫೀಲ್ಡ್‌ಗೆ ಎಂಟ್ರಿ ಕೊಟ್ಟ ರೋಹಿತ್ ಶರ್ಮಾ..ಪಂದ್ಯ ಆಡಲು ಸಜ್ಜಾದ ಕಪ್ತಾನ
ಭಾರತ ಕ್ರಿಕೆಟ್ ತಂಡವನ್ನು ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ ನಂತರ ನಾಯಕ ರೋಹಿತ್ ಶರ್ಮಾ ಮೊದಲ ಸರಣಿ ಆಡಲು ಸಜ್ಜಾಗಿದ್ದಾರೆ. ಐಸಿಸಿ ಟ್ರೋಫಿ ಗೆದ್ದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ಅವರು, ಹೊಸ ಕೋಚ್ ಗೌತಮ್ ಗಂಭೀರ್ ಅವರ ಕೋರಿಕೆಯ ಮೇರೆಗೆ ರಜೆಯನ್ನು ರದ್ದುಗೊಳಿಸಿ, ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡಲು ಶ್ರೀಲಂಕಾಕ್ಕೆ ಆಗಮಿಸಿದ್ದಾರೆ. ಸದ್ಯ ಭಾರತ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡುತ್ತಿದ್ದು. ಮೂರು ಪಂದ್ಯಗಳ ಸರಣಿಯ ಪೈಕಿ ಎರಡರಲ್ಲಿ ಗೆದ್ದು, ಮುಮನ್ನಡೆ ಕಾಯ್ದುಕೊಂಡಿದೆ.
ಟಿ20 ವಿಶ್ವಕಪ್ ಗೆದ್ದ ನಂತರ ಈ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಮೊದಲ ಸರಣಿಯಲ್ಲಿ ಆಡಲು ಶ್ರೀಲಂಕಾ ತಲುಪಿದ್ದಾರೆ. ಭಾರತ ತಂಡ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಮೂರು ಪಂದ್ಯಗಳ ಈ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಮೂರನೇ ಪಂದ್ಯ ಜುಲೈ 30 ರಂದು ನಡೆಯಲಿದೆ. ಇದಾದ ಬಳಿಕ ಟೀಂ ಇಂಡಿಯಾ ಆಗಸ್ಟ್ 2ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಯ ನಾಯಕತ್ವವನ್ನು ರೋಹಿತ್ ಶರ್ಮಾ ನಿರ್ವಹಿಸಲಿದ್ದಾರೆ.
ಭಾರತ ತಂಡ ಆಗಸ್ಟ್ 2 ರಿಂದ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಹವಾಮಾನ ಹಾಗೂ ಸ್ಥಳಕ್ಕೆ ಹೊಂದಿಕೊಳ್ಳಲು ನಾಯಕ ರೋಹಿತ್ ಶರ್ಮಾ ಶ್ರೀಘ್ರವೇ ಆಗಮಿಸಿದ್ದಾರೆ. ಭಾನುವಾರ, ಅವರು ಮುಂಬೈ ತಂಡದ ಸಹ ಆಟಗಾರ ಶ್ರೇಯಸ್ ಅಯ್ಯರ್ ಅವರೊಂದಿಗೆ ಶ್ರೀಲಂಕಾಕ್ಕೆ ಬಂದಿಳಿದರು. ಭಾರತ ತಂಡದ ನೂತನ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ (C), ಶುಭಮನ್ ಗಿಲ್ (VC), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (WK), ರಿಷಬ್ ಪಂತ್ (WK), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್ , ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.