IND vs PAK: ಪಾಕ್ ವಿರುದ್ಧದ ಕದನದಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಆಟಗಾರರು

ಕನ್ನಡಿಗ ಕೆ.ಎಲ್.ರಾಹುಲ್, ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರ ಮೇಲೆ ಭಾರತ ತಂಡ ಹೆಚ್ಚು ಅವಲಂಬಿತವಾಗಿದೆ.

ಭಾನುವಾರ (ಅ.24) ದುಬೈನಲ್ಲಿ ನಡೆಯಲಿರುವ 2021ರ ಟಿ-20 ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ನಾಯಕ ಕೊಹ್ಲಿ ಹೊರತಾಗಿ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಲಿರುವ ಟೀಂ ಇಂಡಿಯಾದ ಅನೇಕ ಪ್ರಮುಖ ಆಟಗಾರರಿದ್ದಾರೆ.  ಕನ್ನಡಿಗ ಕೆ.ಎಲ್.ರಾಹುಲ್, ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಅವರ ಮೇಲೆ ಭಾರತ ತಂಡ ಹೆಚ್ಚು ಅವಲಂಬಿತವಾಗಿದೆ. ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಲಿರುವ ಐವರು ಆಟಗಾರರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆ.ಎಲ್.ರಾಹುಲ್ ಅವರು ಟಿ-20 ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ನಲ್ಲಿರುವ ಬ್ಯಾಟ್ಸ್ ಮನ್ ಆಗಿದ್ದಾರೆ. ಭಾನುವಾರ ನಡೆಯಲಿರುವ ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆಯ ಬ್ಯಾಟಿಂಗ್ ಶಕ್ತಿಯಾಗಿ ರಾಹುಲ್ ಕಣಕ್ಕಿಳಿಯಲಿದ್ದಾರೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ರಾಹುಲ್ 13 ಪಂದ್ಯಗಳಲ್ಲಿ 626 ರನ್ ಗಳಿಸಿದ್ದಾರೆ.

2 /5

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಫೈನಲ್ ಪ್ರವೇಶಿಸುವಲ್ಲಿ ವರುಣ್ ಚಕ್ರವರ್ತಿ ಪ್ರಮುಖ ಪಾತ್ರ ವಹಿಸಿದ್ದರು. ತಂಡದ ಪ್ರಮುಖ ವಿಕೆಟ್ ಟೇಕರ್ ಆಗಿದ್ದ ವರುಣ್ 17 ಪಂದ್ಯಗಳಿಂದ 18 ವಿಕೆಟ್ ಗಳಿಸಿದ್ದರು. ಇವರು ಕೂಡ ಪಾಕ್ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

3 /5

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ಟ್ರೋಫಿ ಎತ್ತಿಹಿಡಿಯುವಲ್ಲಿ ರವೀಂದ್ರ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು. ಚೆನ್ನೈ ಪರ ಆಲ್ ರೌಂಡರ್ ಪ್ರದರ್ಶನ ನೀಡಿದ ಜಡೇಜಾ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಫಾರ್ಮ್ ನಲ್ಲಿದ್ದರು. ಜಡೇಜಾ ಬ್ಯಾಟಿಂಗ್ ನಲ್ಲಿ 145 ಸ್ಟ್ರೈಕ್ ರೇಟ್ ಹೊಂದಿದ್ದರೆ, 13 ವಿಕೆಟ್‌ಗಳನ್ನು ಕೂಡ ಪಡೆದು ಮಿಂಚಿದ್ದರು. ಪಾಕ್ ವಿರುದ್ಧ ಜಡ್ಡು ಸ್ಫೋಟಕ ಆಟವಾಡುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.   

4 /5

ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಟೀಂ ಇಂಡಿಯಾದ ಪ್ರಮುಖ ಬ್ಯಾಟಿಂಗ್ ಬೆನ್ನೆಲುಬಾಗಿದ್ದಾರೆ. ಟಿ-20 ಕ್ರಿಕೆಟ್ ನಲ್ಲಿ 4 ಶತಕ ಭಾರಿಸಿರುವ ರೋಹಿತ್ 2,864 ರನ್ ಗಳಿಸಿದ್ದಾರೆ. ಪಾಕ್ ವಿರುದ್ಧ ಹಿಟ್ ಮ್ಯಾನ್ ಸ್ಫೋಟಕ ಪ್ರದರ್ಶನದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  

5 /5

ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರು. ಬುಮ್ರಾ 20.25ರ ಅತ್ಯುತ್ತಮ ಬೌಲಿಂಗ್ ಸರಾಸರಿಯಲ್ಲಿ 59 ಟಿ-20 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಪಾಕ್ ವಿರುದ್ಧ ಬೂಮ್ ಬೂಮ್ ಬುಮ್ರಾ ಮಾರಕ ಬೌಲಿಂಗ್ ದಾಳಿ ನಡೆಸುವ ಸಾಧ್ಯತೆ ಇದೆ