ಆಸ್ಟ್ರೇಲಿಯಾ ವಿರುದ್ಧ ಸೋತ ದುಃಖದಲ್ಲಿ ಸಂಚಲನದ ನಿರ್ಧಾರ ತೆಗೆದುಕೊಂಡ ರೋಹಿತ್ ಶರ್ಮಾ..! ಅಭಿಮಾನಿಗಳಿಗೆ ಆಘಾತ
Rohit Sharma: ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಗೆಲುವಿನ ನಗಾರಿ ಭಾರಿಸಿತ್ತು. 295 ರನ್‌ಗಳ ಬೃಹತ್ ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರಿತ್ತು.
ಆದರೆ, ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬಾರಿ ಮುಖಭಂಗ ಅನುಭವಿಸಿದೆ.
ಮೊದಲನೆ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡ ಎರಡನೆ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದೆ.
ಇದರ ಬೆನ್ನಲ್ಲೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರ ನಾಯಕತ್ವದ ಕುರಿತು ಪ್ರಶ್ನೆಗಳು ಎದ್ದಿವೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡ, ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಸೋತಿದ್ದೇಕೆ? ಎಂಬ ಪ್ರಶ್ನೆಗಳು ಏಳಲು ಪ್ರಾರಂಭಿಸಿದೆ.
ಸೋಲಿನಿಂದ ನೊಂದಿದ್ದ ರೋಹಿತ್ ಶರ್ಮಾ ಅವರು ನಾಯಕತ್ವಕ್ಕೆ ಗುಡ್ ಬೈ ಹೇಳಲಿದ್ದಾರೆ ಎನ್ನುವ ಸುದ್ದಿ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ರೋಹಿತ್ ಶರ್ಮಾ ಟೆಸ್ಟ್ ಮಾದರಿಯ ನಾಯಕತ್ವಕ್ಕೆ ವಿದಾಯ ಹೇಳಲಿದ್ದಾರೆ ಮತ್ತು ಮೂರನೇ ಟೆಸ್ಟ್‌ನಿಂದ ಬುಮ್ರಾ ಅವರಿಗೆ ಸಂಪೂರ್ಣ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎನ್ನುವ ಸುದ್ದಿ ಸದ್ಯ ಕೇಳಿ ಬರುತ್ತಿದೆ.
ಇನ್ನೂ, ಆಸ್ಟ್ರೇಲಿಯಾ ತಂಡದ ವಿರುದ್ಧದ ಮೂರನೆ ಟೆಸ್ಟ್ ಪಂದ್ಯ ಶನಿವಾರದಿಂದ ಗಬ್ಬಾ ಮೈದಾನದಲ್ಲಿ ನಡೆಯಲಿದ್ದು, 5.50 AM IST ಕ್ಕೆ ಪ್ರಾರಂಭವಾಗಲಿದೆ.