ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಹೊಸ ವ್ಯವಸ್ಥೆ !ವೇತನ ಆಯೋಗವಲ್ಲ ಇನ್ನು ವೇತನ ಹೆಚ್ಚಳ ನಿರ್ಧರಿಸುವುದು ಈ ಅಂಶ
ಹೊಸ ವರ್ಷ ಶುರುವಾಗಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಈ ವರ್ಷ ಮಹತ್ವದ ಸುದ್ದಿ ಬಂದಿದೆ. ಇದು ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಎನ್ನುವುದು ಇಲ್ಲಿ ಗಮನಿಸಬೇಕಾದ ಅಂಶ.
8ನೇ ವೇತನ ಆಯೋಗವನ್ನು ಸರ್ಕಾರಿ ಜಾರಿ ಮಾಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಇದೀಗ ಇದಕ್ಕೆ ಬದಲಿ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
2026ರ ವೇಳೆಗೆ, ಮುಂದಿನ ವೇತನ ಆಯೋಗ ಅಂದರೆ 8 ನೇ ವೇತನ ಆಯೋಗವನ್ನು ರಚಿಸಬೇಕು ಮತ್ತು ಅದರ ಶಿಫಾರಸುಗಳನ್ನು ಜಾರಿಗೊಳಿಸಬೇಕು.ಆದರೆ, ಸದ್ಯಕ್ಕೆ 8ನೇ ವೇತನ ಆಯೋಗ ರಚಿಸುವ ಉದ್ದೇಶ ಇಲ್ಲ ಎಂಬುದು ಕೇಂದ್ರ ಸರ್ಕಾರದ ಇತ್ತೀಚಿನ ನಿಲುವು.
ಹಾಗಾದರೆ, ವೇತನ ಪರಿಷ್ಕರಣೆ ಹೇಗೆ ನಡೆಯುತ್ತದೆ ಎನ್ನುವುದು ಸದ್ಯದ ಪ್ರಶ್ನೆ. ಪರ್ಯಾಯ ವ್ಯವಸ್ಥೆಗೆ ಸಿದ್ಧತೆಗಳು ನಡೆಯುತ್ತಿದ್ದು, ವೇತನ ಪರಿಷ್ಕರಣೆಗೆ ಹೊಸ ಸೂತ್ರವನ್ನು ಬಳಸಲಾಗುವುದು ಎಂದು ಮೂಲಗಳು ತಿಳಿಸಿವೆ.
ವೇತನ ಹೆಚ್ಚಳದ ಲೆಕ್ಕಾಚಾರಕ್ಕೆ ಐಕ್ರಿಯೋಟ್ ಸೂತ್ರವನ್ನು ಬಳಸುವ ಬಗ್ಗೆ ಸರ್ಕಾರ ಈಗ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಹೊಸ ಸೂತ್ರವು ಉದ್ಯೋಗಿಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದರ ಪ್ರಕಾರ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಪಿಂಚಣಿಯಲ್ಲಿ ಭಾರೀ ಏರಿಕೆಯಾಗಲಿದೆ ಎಂದು ನಂಬಲಾಗಿದೆ.
ಪರ್ಫಾರ್ಮೆನ್ಸ್ ಬೇಸ್ಡ್ ಪೇ ಸಿಸ್ಟಮ್ ಎಂಬ ಹೊಸ ವ್ಯವಸ್ಥೆಯಲ್ಲಿ, ಹಣದುಬ್ಬರ ಮತ್ತು ಉದ್ಯೋಗಿ ಕಾರ್ಯಕ್ಷಮತೆಯನ್ನು ಆಧರಿಸಿ ಉದ್ಯೋಗಿಗಳ ವೇತನವನ್ನು ನಿರ್ಧರಿಸಲಾಗುತ್ತದೆ. ಈ ವಿಧಾನವು ಹೆಚ್ಚು ಲಾಭದಾಯಕವೆಂದು ನಂಬಲಾಗಿದೆ. ಫೆಬ್ರವರಿಯಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್‌ನಲ್ಲಿ ಇದನ್ನು ಔಪಚಾರಿಕವಾಗಿ ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಹೊಸ ವ್ಯವಸ್ಥೆಯಡಿಯಲ್ಲಿ, ಹಣದುಬ್ಬರದ ದರ ಮತ್ತು ಉದ್ಯೋಗಿಗಳ ಕಾರ್ಯಕ್ಷಮತೆ ಎರಡನ್ನೂ ಆಧರಿಸಿ ನೌಕರರ ವೇತನ ಮತ್ತು ತುಟ್ಟಿ ಭತ್ಯೆಗಳನ್ನು ನಿರಂತರವಾಗಿ ಹೆಚ್ಚಿಸಲಾಗುವುದು. ಇದರಿಂದ ಉದ್ಯೋಗಿಗಳ ಖರೀದಿ ಸಾಮರ್ಥ್ಯ ಸುಧಾರಿಸುತ್ತದೆ. ಖಾಸಗಿ ವಲಯದ ಉದ್ಯೋಗಿಗಳಂತೆ, ನೌಕರರು ತಮ್ಮ ಕಾರ್ಯಕ್ಷಮತೆಯ ಆಧಾರದ ಮೇಲೆ ವೇತನ ಹೆಚ್ಚಳವನ್ನು ಪಡೆಯುತ್ತಾರೆ.