ಸಾರಾ ತೆಂಡೂಲ್ಕರ್ ಸೇರಿದಂತೆ ಈ ಸ್ಟಾರ್​ ಕಿಡ್‌ಗಳ ಶಿಕ್ಷಣ ಏನಾಗಿದೆ ಗೊತ್ತೇ!

Fri, 24 Nov 2023-12:39 pm,

ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಇಂಗ್ಲೆಂಡ್‌ನಲ್ಲಿ ಹಾಗೂ ನ್ಯೂಯಾರ್ಕ್​ ಯೂನಿವರ್ಸಿಟಿಯಲ್ಲಿ ಡಿಗ್ರಿ ಪಡೆದಿದ್ದಾರೆ.  

ಕ್ರಿಕೆಟ್‌ ದೇವರು ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಟೀಂ ಇಂಡಿಯಾ ಆಟಗಾರ ಶುಬ್​ಮನ್ ಗಿಲ್ ಜೊತೆ ಡೇಟ್ ಮಾಡುತ್ತಿರುವ ವಿಚಾರ ಆಗಾಗ ಮುನ್ನೆಲೆಗೆ ಬರುತ್ತದೆ. ಸಾರಾ ತೆಂಡೂಲ್ಕರ್ ಲಂಡನ್‌ ಯೂನಿವರ್ಸಿಟಿ ಕಾಲೇಜ್‌ನಲ್ಲಿ ಮೆಡಿಸಿನ್ ಪದವಿ ಪಡೆದಿದ್ದಾರೆ.  

ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ಮಗಳು ಸಾರಾ ಅಲಿಖಾನ್ ನ್ಯೂಯಾರ್ಕ್‌ನ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಪಾಲಿಟಿಕಲ್ ಸೈನ್ಸ್ ಓದಿದ್ದಾರೆ.  

ಶ್ರೀದೇವಿ ಅವರ ಪುತ್ರಿ ಜಾನ್ವಿ ಕಪೂರ್ ಧೀರುಭಾಯ್ ಅಂಬಾನಿ ಇಂಟರ್​ನ್ಯಾಷನಲ್ ಸ್ಕೂಲ್‌ನಲ್ಲಿ ಆರಂಭಿಕ ಶಿಕ್ಷಣ ಪಡೆದರು. ಲಾಸ್​ ಏಂಜಲೀಸ್‌ನಲ್ಲಿ ಆ್ಯಕ್ಟಿಂಗ್ ಕೋರ್ಸ್ ಮಾಡಿದ್ದಾರೆ.   

ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಲಂಡನ್ ಹಾಗೂ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಶಿಕ್ಷಣ ಪಡೆದಿದ್ದಾರೆ. ಬ್ಯಾಚುಲರ್ ಆಫ್ ಫೈನ್ ಆರ್ಟ್ಸ್ ಹಾಗೂ ಟೆಲಿವಿಷನ್ ಪ್ರೊಡಕ್ಷನ್ ನಲ್ಲಿ ಡಿಗ್ರಿ ಮಾಡಿದ್ದಾರೆ.   

‘ಸ್ಟೂಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಅನನ್ಯಾ ಪಾಂಡೆ ಲಾಸ್ ಏಂಜಲೀಸ್‌ನಲ್ಲಿ ಶಿಕ್ಷಣ ಪಡೆದಿದ್ದಾರೆ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link