ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !
ಯಾರಿಗೆ ಮಧುಮೇಹ ಇರುತ್ತದೆಯೋ ಅವರು ಜೀವನದುದ್ದಕ್ಕೂ ಔಷಧಿಗಳನ್ನು ಅವಲಂಬಿಸಬೇಕಾಗುತ್ತದೆ.ಆದರೆ, ಸರಿಯಾದ ಆಹಾರ ಮತ್ತು ಜೀವನಶೈಲಿಯನ್ನು ಅನುಸರಿಸುವ ಮೂಲಕ ಈ ರೋಗವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದಲ್ಲದೆ, ಮನೆಮದ್ದುಗಳ ಸಹಾಯದಿಂದಲೂ ಇದನ್ನು ಕಂಟ್ರೋಲ್ ಮಾಡಬಹುದು.
ಹುರಿಗಡಲೆ ಪುಡಿ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.ಇದರ ಸೇವನೆ ಮೂಲಕ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಸುಲಭವಾಗುತ್ತದೆ.
ಹುರಿಗಡಲೆ ಹಿಟ್ಟು ಬೀಟಾ ಗ್ಲುಕನ್ ಅನ್ನು ಹೊಂದಿರುತ್ತದೆ.ಇದು ದೇಹದಲ್ಲಿ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದರ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು,ಇದು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
ಇದಲ್ಲದೆ,ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದರ ನಿಯಮಿತ ಸೇವನೆಯು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ.ಇದು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಒಂದು ಲೋಟ ನೀರಿನಲ್ಲಿ ಒಂದು ಚಮಚ ಹುರಿಗಡಲೆ ಪುಡಿಯನ್ನು ಬೆರೆಸಿ ಕುಡಿಯಬಹುದು.ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬಹಳಷ್ಟು ಸಹಾಯ ಮಾಡುತ್ತದೆ.
ಸೂಚನೆ:ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.