ಹೊಸ ವರ್ಷಾರಂಭದಲ್ಲಿ ಶನಿಯ ಹಿಮ್ಮುಖ ಚಲನೆ, ಈ ಜನರ ಜೀವನದಲ್ಲಿ ಸುವರ್ಣಕಾಲ ಆರಂಭ!

Sun, 26 Nov 2023-3:06 pm,

Saturn Retrograde 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಂಭದಲ್ಲಿಯೇ ಕರ್ಮ ಫಲದಾತ ಶನಿ ತನ್ನ ಹಿಮ್ಮುಖ ಮಾರ್ಗದಲ್ಲಿ ಚಲಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭಗೊಳ್ಳುತ್ತಿದೆ. (Spiritual News In Kannada)  

ವೃಷಭ ರಾಶಿ: ಶನಿ ನಿಮ್ಮ ರಾಶಿಯ ಅಧಿಪತಿಯಾಗಿರುವ ಶುಕ್ರನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾನೆ. ಇದಲ್ಲದೆ ಆತ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ವಕ್ರ ನಡೆ ಅನುಸರಿಸಲಿದ್ದಾನೆ. ಇದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಅಪಾರ ಉನ್ನತಿಯ ಯೋಗ ಆತ ಕರುಣಿಸಲಿದ್ದಾನೆ. ಈ ಅವಧಿಯಲ್ಲಿ ನೌಕರವರ್ಗದ ಜನರಿಗೆ ಇಂಕ್ರಿಮೆಂಟ್-ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಧಾರ್ಮಿಕ ಯಾತ್ರೆಯೂ ಸಂಭವಿಸುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. 

ಮಕರ ರಾಶಿ: ಶನಿ ಮಹಾರಾಜ ನಿಮ್ಮ ಜಾತಕದ ಧನಭಾವದಲ್ಲಿ ವಕ್ರ ನಡೆ ಅನುಸರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ಜನರು ನಿಮ್ಮ ಮಾತಿನಿಂದ ಪ್ರಭಾವಿತರಾಗಲಿದ್ದಾರೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಸಹೋದರ-ಸಹೋದರಿಯರ ಸಂಪೂರ್ಣ ಬೆಂಬಲ ನಿಮಗೆ ಇರಲಿದೆ. ವೈವಾಹಿಕ ಜೀವನದ ಕುರಿತು ಹೇಳುವುದಾದರೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಮಕರ ರಾಶಿಯ ಜಾತಕದವರಿಗೆ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಆರ್ಥಿಕ ಸ್ಥಿತಿ ಬಲಿಷ್ಠವಾಗಿಸಲು ನೀವು ಸಾಕಷ್ಟು ಶ್ರಮಪಡುವಿರಿ ಮತ್ತು ಅದರಲ್ಲಿ ಯಶಸ್ಸನ್ನು ಕಾಣುವಿರಿ. 

ಕುಂಭ ರಾಶಿ: ಶನಿದೇವ ನಿಮ್ಮ ರಾಶಿಯ ರಾಷ್ಯಾಧಿಪನಾಗಿದ್ದಾನೆ. ಇದಲ್ಲದೆ ಆತ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ವಕ್ರನಡೆ ಅನುಸರಿಸುತ್ತಿದ್ದಾನೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಮೆರಗು ಕಾಣಲು ಸಿಗಲಿದೆ. ದೊಡ್ಡ ದೊಡ್ಡ ವ್ಯಕ್ತಿಗಳ ಜೊತೆಗೆ ನಿಮ್ಮ ಹೊಸ ಸಂಬಂಧಗಳು ನಿರ್ಮಾಣಗೊಳ್ಳಲಿವೆ. ಇದರಿಂದ ನಿಮಗೆ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಉನ್ನತಿಯಾಗಲಿದೆ. ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ನಿಮಗೆ ಉತ್ತಮ ಲಾಭ ಸಿಗಲಿದೆ. ಕುಟುಂಬದ ಯಾವುದಾದರೂ ಒಬ್ಬ ಸದಸ್ಯನಿಗೆ ಸರ್ಕಾರಿ ನೌಕರಿ ಸಿಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನೇಸುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಸಕಾರಾತ್ಮಕ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link