ಹತ್ತು ವರ್ಷಗಳ ಬಳಿಕ ಜನವರಿಯಲ್ಲಿ ಕೇಂದ್ರ ತ್ರಿಕೋನ ರಾಜಯೋಗ ರಚನೆ, ಈ ಜನರಿಗೆ ಆಕಸ್ಮಿಕ ಧನಲಾಭ-ಉನ್ನತಿಯ ಯೋಗ!

Wed, 20 Dec 2023-4:10 pm,

Saturn Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ್ ಶನಿ ದೇವ ಹೊಸ ವರ್ಷದ ಆರಂಭದಲ್ಲಿ ಕೇಂದ್ರ ತ್ರಿಕೋನ ರಾಜಯೋಗ ರೂಪಿಸುತ್ತಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾಗ್ಯೋದಯ ಯೋಗ ಒದಗಿಬರಲಿದೆ. (Spiritual News In Kannada)

ಕುಂಭ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳವಾಗಲಿದೆ. ಶನಿ ದೇವನ ಕೃಪೆಯಿಂದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಇದರಿಂದ ನಿಮ್ಮ ಜೀವನದಲ್ಲಿ ಲಾಭ ಹಾಗೂ ಉನ್ನತಿಯ ಹಲವು ಅವಕಾಶಗಳು ಒದಗಿ ಬರಲಿವೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ವಿವಾಹಿತರಿಗೆ ಬಾಳಸಂಗಾತಿಯ ಬೆಂಬಲ ಸಿಗಲಿದೆ. ದಾಂಪತ್ಯ ಜೀವನ ಸುಖದಿಂದ ಕೂಡಿರಲಿದೆ. ಅವಿವಾಹಿತರ ನಿಶ್ಚಿತಾರ್ಥ ನೆರೆವೆರುವ ಸಾಧ್ಯತೆ ಇದೆ. 

ಸಿಂಹ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ಒಂದರ ಮೇಲೊಂದರಂತೆ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸ್ವಭಾವ ಧಾರ್ಮಿಕವಾಗಿರಲಿದೆ. ಇದಲ್ಲದೆ ನಿಮ್ಮ ವೈವಾಹಿಕ ಜೀವನ ಕೂಡ ಉತ್ತಮ ವಾಗಿರಲಿದೆ. ಸಂಗಾತಿಯ ಜೊತೆಗೆ ನಿಮ್ಮ ಸಮತೋಲನ ಉತ್ತಮವಾಗಿರಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಉತ್ತಮ ಲಾಭ ಸಿಗಲಿದೆ. ನೌಕರ ವರ್ಗದ ಜನರಿಗೆ ಪದೋನ್ನತಿಯ ಯೋಗ ಕೂಡ ರೂಪುಗೊಳ್ಳುತ್ತಿದೆ. 

ವೃಶ್ಚಿಕ ರಾಶಿ: ಕೇಂದ್ರ ತ್ರಿಕೋನ ರಾಜಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತಿದೆ. ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಮನೆ-ಫ್ಲ್ಯಾಟ್ ಖರೀದಿಯ ಅವಕಾಶ ಒದಗಿವರಲಿದೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗುವ ಕಾರಣ ಉನ್ನತಿಯ ದ್ವಾರಗಳು ತೆರೆದುಕೊಳ್ಳಲಿವೆ. ರಿಯಲ್ ಎಸ್ಟೇಟ್, ಮೆಡಿಕಲ್ ಹಾಗೂ ಔಷಧಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರಿಗೆ ಈ ಸಮಯ ಅದ್ಭುತವಾಗಿದೆ. ಇನ್ನೊಂದೆಡೆ ನೌಕರ ವರ್ಗದ ಜನರಿಗೆ ಮಾರ್ಚ್ ಬಳಿಕ ಬಡ್ತಿ ಭಾಗ್ಯ ಪ್ರಾಪ್ತಿಯಾಗುವ ಯೋಗವಿದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link