2025ರವರೆಗೆ ತನ್ನ ಪ್ರಿಯ ರಾಶಿಯಲ್ಲಿ ಶನಿದೇವನ ವಾಸ್ತವ್ಯ, ಈ 4 ರಾಶಿಯ ಜನರಿಗೆ ಸೋಲೆಂಬುದೇ ಇಲ್ಲ

Shani Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ, ಕರ್ಮಫಲದಾತ ಎಂತಲೇ ಕರೆಯಲ್ಪಡುವ ಶನಿ ದೇವನ ಸ್ಥಾನದಲ್ಲಿನ ಬದಲಾವಣೆ ಎಲ್ಲಾ 12 ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ವೈದಿಕ ಜ್ಯೋತಿಷ್ಯದಲ್ಲಿ ನ್ಯಾಯದ ದೇವರು ಎಂದು ಬಣ್ಣಿಸಲ್ಪಡುವ ಶನಿ ಮಹಾತ್ಮನ ಸ್ಥಾನದಲ್ಲಿನ ಸಣ್ಣ ಬದಲಾವಣೆಯು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಈ ವರ್ಷದ ಆರಂಭದಲ್ಲಿ ತನ್ನ ಪ್ರಿಯ ರಾಶಿ ಕುಂಭ ರಾಶಿಯನ್ನು ಪ್ರವೇಶಿಸಿರುವ ಶನಿ ದೇವನು 2025ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. 

2 /6

ಕುಂಭ ರಾಶಿಯಲ್ಲಿರುವ ಶನಿಯ ಶುಭ-ಅಶುಭ ಪರಿಣಾಮಗಳು ದ್ವಾದಶ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, 2025ರವರೆಗೆ ತನ್ನ ಪ್ರಿಯ ರಾಶಿಚಕ್ರ ಚಿಹ್ನೆಯಲ್ಲಿ ಸಂಚರಿಸಲಿರುವ ಶನಿದೇವನು ನಾಲ್ಕು ರಾಶಿಯವರ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಯಶಸ್ಸನ್ನು ನೀಡಲಿದ್ದಾನೆ. ಇವರಿಗೆ ಸೋಲು ಎಂಬುದೇ ಇರುವುದಿಲ್ಲ ಎಂದು ಹೇಳಲಾಗುತ್ತಿದೆ.   

3 /6

ಕುಂಭ ರಾಶಿಯಲ್ಲಿ ಉಪಸ್ಥಿತನಿರುವ ಶನಿಯು ಮಿಥುನ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದ್ದಾನೆ. ಈ ಸಮಯದಲ್ಲಿ ಮಿಥುನ ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿದ್ದು ಪ್ರತಿ ಕೆಲಸದಲ್ಲೂ ಯಶಸ್ಸು ನಿಮ್ಮದಾಗಲಿದೆ. 

4 /6

ಕನ್ಯಾ ರಾಶಿಯವರಿಗೂ ಕೂಡ ಶನಿ ಸಂಚಾರವು ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. 2025ರವರೆಗೆ ಕುಂಭ ರಾಶಿಯಲ್ಲಿ ವಾಸ್ತವ್ಯ ಹೊಡಲಿರುವ ಶನಿ ದೇವನು ಈ ಸಮಯದಲ್ಲಿ ಕನ್ಯಾ ರಾಶಿಯವರಿಗೆ ಅವರು ಕೈ ಹಾಕುವ ಪ್ರತಿ ಕೆಲಸದಲ್ಲೂ ಕೈ ಹಿಡಿಯಲಿದ್ದಾನೆ ಎಂದು ಹೇಳಲಾಗುತ್ತಿದೆ. 

5 /6

ಕುಂಭ ರಾಶಿಯಲ್ಲಿರುವ ಶನಿಯು ತುಲಾ ರಾಶಿಯವರಿಗೆ ದೀರ್ಘ ಸಮಯದ ಸಮಸ್ಯೆಗಳಿಂದ ಪರಿಹಾರವನ್ನು ನೀಡಲಿದೆ. ಈ ಸಮಯದಲ್ಲಿ ನಿಮ್ಮ ಆದಾಯದಲ್ಲಿ ಹೆಚ್ಚಳವಾಗಲಿದ್ದು ನಿಮ್ಮ ಕನಸು ನನಸಾಗುವ ಸಾಧ್ಯತೆಯೂ ಇದೆ. 

6 /6

ಶನಿಯ ಸಂಚಾರವು ಧನು ರಾಶಿಯವರ ಬದುಕಿನಲ್ಲಿಯೂ ಒಳ್ಳೆಯ ದಿನಗಳನ್ನು, ಒಳ್ಳೆಯ ಫಲಗಳನ್ನು ತರಲಿದೆ. 2025ರವರೆಗೆ ಶನಿಯ ಆಶೀರ್ವಾದದಿಂದಾಗಿ ಈ ರಾಶಿಯವರು ವೃತ್ತಿ ರಂಗದಲ್ಲಿ ಯಶಸ್ಸನ್ನು, ವ್ಯಾಪಾರ-ವ್ಯವಹಾರದಲ್ಲಿ ಭರ್ಜರಿ ಲಾಭವನ್ನು ಗಳಿಸುವರು ಎಂದು ಹೇಳಲಾಗುತ್ತಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.