Weight Loss: ದೇಹದ ಕೊಬ್ಬನ್ನು ಬರ್ನ್ ಮಾಡುವ ಮ್ಯಾಜಿಕ್ ಡ್ರಿಂಕ್ಸ್.. ಬೆಳಗೆದ್ದ ಕೂಡಲೇ ಕುಡಿದರೆ ಒಂದೇ ವಾರದಲ್ಲಿ ಕರಗುತ್ತೆ ಹೊಟ್ಟೆ ಬೊಜ್ಜು!

Tue, 05 Nov 2024-8:30 pm,

ದೇಹದ ಕೊಬ್ಬನ್ನು ಸುಡುವ ಈ ಡಿಟಾಕ್ಸ್ ಪಾನೀಯಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸಬಹುದು. ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತವೆ.

ಚಳಿಗಾಲ ಸಮೀಪಿಸುತ್ತಿದ್ದಂತೆ ಹೆಚ್ಚಿನ ಜನರು ಕರಿದ ಆಹಾರಗಳು ಮತ್ತು ಹೆಚ್ಚಿನ ಕೊಬ್ಬಿನ ಆಹಾರವನ್ನು ಸೇವಿಸುತ್ತಾರೆ. ಅತಿಯಾಗಿ ತಿನ್ನುವುದು ತೂಕ ಹೆಚ್ಚಾಗಲು ಕಾರಣವಾಗಬಹುದು. ನೀವು ತೂಕವನ್ನು ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ಹೆಚ್ಚಿನ ಕ್ಯಾಲೋರಿಯುಕ್ತ ಆಹಾರವನ್ನು ತಿನ್ನುವುದನ್ನು ತಪ್ಪಿಸಬೇಕು.

ಗ್ರೀನ್ ಟೀ ತೂಕ ನಷ್ಟಕ್ಕೆ ಸಹಾಯ ಮಾಡುವ ಸಾಮರ್ಥ್ಯ ಹೊಂದಿದೆ. ಕೊಬ್ಬನ್ನು ಸುಡಲು ಗ್ರೀನ್ ಟೀ ಸಹಾಯ ಮಾಡುತ್ತದೆ. ಶುಂಠಿಯು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

ಬೆಚ್ಚಗಿನ ನೀರಿನಲ್ಲಿ ದಾಲ್ಚಿನ್ನಿ ಪುಡಿ ಮತ್ತು ಜೇನುತುಪ್ಪ ಹಾಕಿ ಕುಡಿಯಬಹುದು. ಇದು ಆರೋಗ್ಯಕರ ಪಾನೀಯವಾಗಿದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ದಾಲ್ಚಿನ್ನಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

ತುರಿದ ಶುಂಠಿ ಮತ್ತು ನಿಂಬೆ ರಸದೊಂದಿಗೆ ಬೆಚ್ಚಗಿನ ನೀರನ್ನು ಬೆರೆಸಿ ಕುಡಿಯುವುದು ಕೊಬ್ಬನ್ನು ಸುಡುತ್ತದೆ. ನಿಂಬೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ಇದನ್ನು ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.  

ಸೋಂಪು ಕಾಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಉಪಯುಕ್ತವಾಗಿದೆ. ಸೋಂಪು ಕಾಳುಗಳನ್ನು ರಾತ್ರಿ ಬೆಚ್ಚಗಿನ ನೀರಿನಲ್ಲಿ ನೆನೆಸಿ. ಈ ನೀರನ್ನು ಬೆಳಗೆದ್ದ ಬಳಿಕ ಕುಡಿಯಿರಿ. ಇದನ್ನು ಹಸಿವನ್ನು ನಿಯಂತ್ರಿಸುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link