2022 Nobel Prizes: 2022ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ

ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿರುವ ವಿವಿಧ ಸಾಧಕರನ್ನು ಗುರುತಿಸಿ, ನೊಬೆಲ್ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತದೆ. 1895ರಿಂದ ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯ ಅನುಸಾರ ಐದು ಪ್ರತ್ಯೇಕ ವಿಭಾಗಗಳಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

1 /7

ವೈದ್ಯಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ ಮತ್ತು ಶಾಂತಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸ್ವೀಡನ್ ದೇಶದ ಕೈಗಾರಿಕೋದ್ಯಮಿ ಮತ್ತು ಡೈನಮೈಟ್ ಸಂಶೋಧಕ ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯ ಪ್ರಕಾರ ಈ ಪ್ರಶಸ್ತಿ ನೀಡಲಾಗುತ್ತದೆ.  

2 /7

ಇನ್ನು 2022ನೇ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಜಿನೋಮ್‌ಗಳಿಗೆ ಸಂಬಂಧಿಸಿದ ಸಂಶೋಧನೆಗಳಿಗಾಗಿ ಸ್ವಾಂಟೆ ಪಾಬೊಗೆ ಪ್ರಶಸ್ತಿ ನೀಡಲಾಗಿದೆ.

3 /7

2022ನೇ ಸಾಲಿನ ಭೌತಶಾಸ್ತ್ರ ಮಾಡಿರುವ ಸಾಧನೆಗೆ ಅಲೈನ್ ಆಸ್ಪೆಕ್ಟ್, ಜಾನ್ ಎಫ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

4 /7

ಕ್ಯಾರೊಲಿನ್ ಆರ್. ಬರ್ಟೊಝಿ, ಮಾರ್ಟೆನ್ ಮೆಲ್ಡಾಲ್ ಮತ್ತು ಕೆ. ಬ್ಯಾರಿ ಶಾರ್ಪ್‌ಲೆಸ್ ಅವರಿಗೆ ಕ್ಲಿಕ್ ಕೆಮಿಸ್ಟ್ರಿ ಮತ್ತು ಬಯೋಆರ್ಥೋಗೋನಲ್ ಕೆಮಿಸ್ಟ್ರಿ ಅಭಿವೃದ್ಧಿಗಾಗಿ ರಸಾಯನಶಾಸ್ತ್ರದಲ್ಲಿ ಪ್ರಶಸ್ತಿ ನೀಡಲಾಗಿದೆ.

5 /7

ಬೆಲಾರಸ್ ಮಾನವ ಹಕ್ಕುಗಳ ಕಾರ್ಯಕರ್ತ ಅಲೆಸ್ ಬಿಯಾಲಿಯಾಟ್ಸ್ಕಿ ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಗೆ ಪ್ರಶಸ್ತಿ ನೀಡಲಾಗಿದೆ.

6 /7

ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರಿಗೆ 2022ನೇ ಸಾಲಿನ ಸಾಹಿತ್ಯ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ

7 /7

ಬೆನ್ ಬರ್ನಾಂಕೆ, ಡೌಗ್ಲಾಸ್ ಡೈಮಂಡ್ ಮತ್ತು ಫಿಲಿಪ್ ಡೈಬ್ವಿಗ್ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ.