ಕ್ರಿಕೆಟ್ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್... ಟೀಂ ಇಂಡಿಯಾಗೆ ಮತ್ತೆ ವಿರಾಟ್ ಕೊಹ್ಲಿ ಕ್ಯಾಪ್ಟನ್! ʼರಾಜʼನ ಹೆಗಲಿಗೆ ಭಾರತೀಯ ಕ್ರಿಕೆಟ್ ರಾಜ್ಯಾಭಾರ!?
ಕಳೆದ ಕೆಲವು ಪಂದ್ಯಗಳಲ್ಲಿ ನಿರಂತರ ವೈಫಲ್ಯ ಅನುಭವಿಸುತ್ತಿರುವ ರೋಹಿತ್ ಶರ್ಮಾ ಟೆಸ್ಟ್ ವೃತ್ತಿಜೀವನದ ಮೇಲೆ ಪ್ರಶ್ನೆಗಳು ಭುಗಿಲೆದ್ದಿವೆ. ಆಸ್ಟ್ರೇಲಿಯ ಪ್ರವಾಸದ ನಂತರ ಟೆಸ್ಟ್‌ಗೆ ಗುಡ್‌ಬೈ ಹೇಳುವ ಸಾಧ್ಯತೆಯೂ ಇದೆ ಎಂದು ಹಲವಾರು ವರದಿಗಳು ಹೇಳುತ್ತಿವೆ.
'ಹಿಟ್ ಮ್ಯಾನ್' ಶರ್ಮಾ ಟೆಸ್ಟ್ ತಂಡದಿಂದ ಹೊರಗುಳಿದರೆ ಮುಂದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸುತ್ತಾರೆ? ಎಂಬುದು ಸದ್ಯದ ದೊಡ್ಡ ಪ್ರಶ್ನೆ. ರೋಹಿತ್ ನಂತರ ಟೀಂ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಎಲ್ಲರಿಗೂ ತಿಳಿಯಬೇಕಿದೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ ವಿರಾಟ್ ಕೊಹ್ಲಿ ನಾಯಕತ್ವದ ಪಾತ್ರಕ್ಕೆ ಮರಳಬಹುದು. ಅಂದರೆ ಟೀಂ ಇಂಡಿಯಾ ಟೆಸ್ಟ್ ಮುಂದಾಳತ್ವ ವಿರಾಟ್ ಹೆಗಲಿಗೆ ಬೀಳಬಹುದು. ಏಕೆಂದರೆ ಆಸ್ಟ್ರೇಲಿಯಾ ಪ್ರವಾಸದ ವೇಳೆ ರೋಹಿತ್ ಶರ್ಮಾಗಿಂತ ಹೆಚ್ಚು ಆಕ್ರಮಣಕಾರಿಯಾಗಿ ವಿರಾಟ್ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ರೋಹಿತ್‌ಗಿಂತಲೂ ಹೆಚ್ಚು ಯುವ ಆಟಗಾರರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಅನುಭವದ ಆಧಾರದ ಮೇಲೆ, ನಿರಂತರವಾಗಿ ಯುವ ಆಟಗಾರರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಮೊದಲ ನಾಯಕ ವಿರಾಟ್ ಕೊಹ್ಲಿ. 2014ರಿಂದ 2022ರವರೆಗೆ ಒಟ್ಟು 68 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. 58.82 ರ ಸರಾಸರಿಯಲ್ಲಿ 40 ಪಂದ್ಯಗಳನ್ನು ಗೆದ್ದಿದ್ದರೆ, 17 ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದಲ್ಲದೇ 11 ಪಂದ್ಯಗಳು ಡ್ರಾ ಆಗಿವೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಬ್ಲೂ ಬಾಯ್ಸ್, ಇದುವರೆಗೆ 24 ಪಂದ್ಯಗಳನ್ನು ಆಡಿದೆ. ಅದರಲ್ಲಿ 12 ಪಂದ್ಯಗಳನ್ನು ಗೆದ್ದಿದೆ, ಒಂಬತ್ತು ಪಂದ್ಯಗಳಲ್ಲಿ ಸೋಲನ್ನು ಎದುರಿಸುತ್ತಿದೆ. ಮೂರು ಪಂದ್ಯಗಳು ಡ್ರಾ ಆಗಿವೆ. ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶೇಕಡಾ 50.00 ಪಂದ್ಯಗಳನ್ನು ಗೆದ್ದಿದೆ.