Shani Ast 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಯವರ ಜೀವನದಲ್ಲಿ ಮಹತ್ತರವಾದ ಬದಲಾವಣೆಗಳಿಗೆ ಕಾರಣವಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದಲ್ಲಿ, ನ್ಯಾಯದ ದೇವರು ಕರ್ಮಗಳಿಗೆ ತಕ್ಕ ಫಲ ನೀಡುವ ಗ್ರಹ ಎಂದು ಬಣ್ಣಿಸಲಾಗುವ ಶನಿದೇವನನ್ನು ಕ್ರೂರ ಗ್ರಹ ಎಂತಲೂ ಕರೆಯಲಾಗುತ್ತದೆ.
ಶನಿ ಈ ವರ್ಷವೂ ಕುಂಭ ರಾಶಿಯಲ್ಲಿದೆ ಸಂಚರಿಸಲಿದ್ದಾನೆ. ಆದರೆ, 2024ರಲ್ಲಿ ಶನಿಯ ಸಂಚಾರದಲ್ಲಿ ಮೂರು ಬಾರಿ ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿ ಮೊದಲಿಗೆ ಶನಿಯು ಅಸ್ತಮಿಸಲಿದ್ದಾನೆ.
ಶನಿ ಅಸ್ತ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು 11 ಫೆಬ್ರವರಿ 2024 ರಂದು ಅಸ್ತಮಿಸಲಿದ್ದು 18 ಮಾರ್ಚ್ 2024 ರವರೆಗೆ ಇದೇ ಸ್ಥಿತಿಯಲ್ಲಿ ಇರಲಿದ್ದಾನೆ.
ಶನಿ ಅಸ್ತ ಪ್ರಭಾವ: ಶನಿ ಅಸ್ತದ ಪರಿಣಾಮ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ ಆದರೂ, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ಸಂಕಷ್ಟದ ಸಮಯ ಎಂದು ಬಣ್ಣಿಸಲಾಗುತ್ತಿದೆ. ಹಾಗಿದ್ದರೆ, ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ತಿಳಿಯಿರಿ.
ಕರ್ಕಾಟಕ ರಾಶಿ: ಆಸ್ತಮ ಸ್ಥಿತಿಯಲ್ಲಿರುವ ಶನಿ ದೇವನು ಕರ್ಕಾಟಕ ರಾಶಿಯವರಿಗೆ ತೊಂದರೆಗಳನ್ನು ಹೆಚ್ಚಿಸಲಿದ್ದಾನೆ. ಪ್ರತಿಯೊಂದು ಕೆಲಸದಲ್ಲೂ ನೀವು ಅಡೆತಡೆಗಳನ್ನು ಎದುರಿಸಬಹುದು. ಶನಿಗ್ರಹದ ದುಷ್ಪರಿಣಾಮಗಳಿಂದಾಗಿ ಈ ಸಮಯದಲ್ಲಿ ನೀವು ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ನಿಗಾವಹಿಸುವುದು ಅವಶ್ಯಕವಾಗಿದೆ.
ಮಕರ ರಾಶಿ: ಈ ವರ್ಷವೂ ಮಕರ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಭಾವವಿದೆ. ಇದರೊಂದಿಗೆ ಇನ್ನೂ ಕೆಲವೇ ದಿನಗಳಲ್ಲಿ ಅಸ್ತಮಿಸಲಿರುವ ಶನಿ ಮಹಾತ್ಮನು ಈ ರಾಶಿಯವರಿಗೆ ಉದ್ಯೋಗ ವ್ಯವಹಾರದಲ್ಲಿ ಸಮಸ್ಯೆಗಳನ್ನು ಹೆಚ್ಚಿಸಲಿದ್ದಾನೆ. ಹಣಕಾಸಿನ ಸಮಸ್ಯೆಗಳು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಾಗುವಂತೆ ಮಾಡಬಹುದು.
ಕುಂಭ ರಾಶಿ: ಸ್ವ ರಾಶಿಯಲ್ಲಿರುವ ಶನಿ ದೇವನು ಅಸ್ತಮಿಸಿದಾಗ ಈ ರಾಶಿಯವರು ವೃತ್ತಿ, ವ್ಯವಹಾರಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಕಷ್ಟಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ಹಳೆಯ ರೋಗಗಳು ಉಲ್ಬಣಿಸುವ ಸಾಧ್ಯತೆ ಇದ್ದು, ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮೀನ ರಾಶಿ: ಶನಿ ಅಸ್ತ ಸ್ಥಿತಿಯು ಮೀನ ರಾಶಿಯ ಜನರಿಗೆ ವ್ಯಾಪಾರದಲ್ಲಿ ಭಾರೀ ನಷ್ಟವನ್ನು ನೀಡಬಹುದು. ಈ ರಾಶಿಯ ಜನರು ತಮ್ಮ ವೃತ್ತಿಜೀವನದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗಬಹುದು. ಮಾತ್ರವಲ್ಲ, ನಿಮ್ಮ ವೈವಾಹಿಕ ಜೀವನದಲ್ಲೂ ಹಲವು ಏರಿಳಿತಗಳಿರಬಹುದು. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.