ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನಲ್ಲಿ ಹೊಸ ಗರ್ಲ್‌ಫ್ರೆಂಡ್‌ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ಶಿಖರ್‌ ಧವನ್

Shikhar Dhawan New Girlfriend: ಗಬ್ಬರ್‌ ಸಿಂಗ್‌ ಖ್ಯಾತಿಯ ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನಲ್ಲಿ ತಮ್ಮ ಹೊಸ ಗೆಳತಿಯ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ತಮ್ಮಿಬ್ಬರ ರೋಮ್ಯಾಂಟಿಕ್ ಚಿತ್ರಗಳನ್ನು ಶಿಖರ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Shikhar Dhawan Celebrates Girlfriend Birthday: ಟೀಂ ಇಂಡಿಯಾದ ಮಾಜಿ ಕ್ರಿಕೆಟರ್‌ ಶಿಖರ್‌ ಧವನ್‌ ತಮ್ಮ ವಿಶಿಷ್ಟ ಬ್ಯಾಟಿಂಗ್‌ ಕೌಶಲ್ಯಕ್ಕೆ ಹೆಸರುವಾಸಿ. ಈ ಸ್ಟಾರ್‌ ಕ್ರಿಕೆಟಿಗ ಇತ್ತೀಚೆಗಷ್ಟೇ ಸೋಫಿ ಶೈನ್‌ ಎಂಬಾಕೆಯ ಜೊತೆಗೆ ಡೇಟಿಂಗ್‌ ಮಾಡುತ್ತಿದ್ದಾರೆಂದು ಸಖತ್‌ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಐರಿಶ್ ಪ್ರಜೆ ಸೋಫಿ ಶೈನ್ ಜೊತೆ ಡೇಟಿಂಗ್ ಮಾಡುತ್ತಿರುವುದುದಾಗಿ ಸ್ವತಃ ಶಿಖರ್ ತಿಳಿಸಿದರು. ಇದೀಗ ಅವರು ತಮ್ಮ ಗೆಳತಿಯ ಹುಟ್ಟುಹಬ್ಬವನ್ನ ಅದ್ದೂರಿಯಾಗಿ ಆಚರಿಸಿದ್ದಾರೆ. ಕಡಲತೀರದಲ್ಲಿ ತಮ್ಮ ಗೆಳತಿಯ ಹುಟ್ಟುಹಬ್ಬ ಆಚರಿಸಿರುವ ಫೋಟೋಗಳನ್ನು ಶಿಖರ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅವರ ಸಾವಿರಾರು ಅಭಿಮಾನಿಗಳು ಶಿಖರ್‌ ಹೊಸ ಗರ್ಲ್‌ಫ್ರೆಂಡ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /5

ಪತ್ನಿಗೆ ಡಿವೋರ್ಸ್ ನೀಡಿರುವ ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಹೊಸ ಹುಡುಗಿ ಹುಡುಕಿಕೊಂಡಿದ್ದಾರೆ. 2025ರ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿ ವೇಳೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ಧವನ್ ಓರ್ವ ಮಹಿಳೆ ಜೊತೆ ಕಾಣಿಸಿಕೊಂಡಿದ್ದರು. ಇಬ್ಬರೂ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡು ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದ್ದರು. ಧವನ್ ಜೊತೆಗಿದ್ದ ಮಹಿಳೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. 

2 /5

ತಮ್ಮ ಹೊಸ ಗೆಳತಿಯನ್ನು ಸ್ವತಃ ಶಿಖರ್‌ ಅಭಿಮಾನಿಗಳಿಗೆ ಪರಿಚಯಿಸಿದ್ದರು. ಅವರ ಹೊಸ ಗರ್ಲ್‌ಫ್ರೆಂಡ್‌ ಐರ್ಲೆಂಡ್‌ನ ಸೋಫಿ ಶೈನ್ ಎಂದು ತಿಳಿದುಬಂದಿತು. ಧವನ್ ಮತ್ತು ಸೋಫಿ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಕೂಡ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಧವನ್ ತಮ್ಮ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. 

3 /5

ಶಿಖರ್‌ ಅವರ ಗೆಳತಿ ಸೋಫಿಗೆ 36 ವರ್ಷ ತುಂಬಿದೆ. ಹೀಗಾಗಿ ಈ ಜೋಡಿ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ನಲ್ಲಿ ಮೋಜು-ಮಸ್ತಿ ಮಾಡುತ್ತಿದೆ. ತಮ್ಮ ಹೊಸ ಗೆಳತಿಯ ಹುಟ್ಟುಹಬ್ಬವನ್ನ ಶಿಖರ್‌ ವಿಶೇಷವಾಗಿ ಆಚರಿಸಿದ್ದಾರೆ. ಕಡಲತೀರದಲ್ಲಿ ಸೋಫಿ ಶೈನ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

4 /5

ತಮ್ಮಿಬ್ಬರ ರೋಮ್ಯಾಂಟಿಕ್ ಚಿತ್ರಗಳನ್ನು ಶಿಖರ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ʼHappy Birthday My ❤️ʼ ಎಂದು ಶಿಖತ್‌ ಈ ಫೋಟೋಗಳಿಗೆ ಕ್ಯಾಪ್ಶನ್‌ ನೀಡಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿವೆ. ಶಿಖತ್‌ ಅವರ ನೂರಾರು ಅಭಿಮಾನಿಗಳು ಸೋಫಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. 

5 /5

ಮಾಜಿ ಕಿಕ್ ಬಾಕ್ಸರ್ ಆಯೇಷಾ ಮುಖರ್ಜಿಯೊಂದಿಗೆ ಶಿಖರ್ ಧವನ್ 2008ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಾದ ನಾಲ್ಕು ವರ್ಷಗಳ ಬಳಿಕ ಅಂದರೆ 2012ರಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆಯೇಷಾ ಮುಖರ್ಜಿ ವಯಸ್ಸಿನಲ್ಲಿ ಧವನ್‌ಗಿಂತ 12 ವರ್ಷ ದೊಡ್ಡವರು. ಆಯೇಷಾ ಮತ್ತು ಧವನ್ ನಡುವಿನ ದಾಂಪತ್ಯ ಜೀವನ ಹೆಚ್ಚು ಕಾಲ ಉಳಿಯಲಿಲ್ಲ. ಇಬ್ಬರು 2023ರ ಅಕ್ಟೋಬರ್ 5ರಂದು ವಿಚ್ಛೇದನ ಪಡೆದುಕೊಂಡಿದ್ದರು.