ಧನು ರಾಶಿಗೆ ಐಶ್ವರ್ಯದಾತನ ಪ್ರವೇಶ, ಹೊಸ ವರ್ಷದಲ್ಲಿ ಧನಲಕ್ಷ್ಮಿ ಕೃಪೆಯಿಂದ ಈ ಜನರ ಜೀವನದಲ್ಲಿ ಶುಕ್ರದೆಸೆ ಆರಂಭ!

Mon, 18 Dec 2023-3:45 pm,

Shukra Dhanu Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿ ಧನು ರಾಶಿಗೆ ಶುಕ್ರನ ಪ್ರವೇಶ ನೆರವೇರಲಿದೆ. ಇದರಿಂದ ಮೂರು ರಾಶಿಗಳ ಜನರ ಜೀವನದಲ್ಲಿ ಲಕ್ಷ್ಮಿ ಕೃಪೆಯಿಂದ ಶುಕ್ರದೆಸೆ ಆರಂಭಗೊಳ್ಳಲಿದೆ, ಬನ್ನಿ ಆ ಭಾಗ್ಯಶಾಲಿ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)  

ಮೇಷ ರಾಶಿ: ಶುಕ್ರ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಅದೃಷ್ಟದ ಭಾರಿ ಬೆಂಬಲ ಪ್ರಾಪ್ತಿಯಾಗಲಿದೆ. ನಿಂತುಹೋದ ಕೆಲಸಗಳು ಈ ಅವಧಿಯಲ್ಲಿ ಪೂರ್ಣಗೊಳ್ಳಲಿವೆ, ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ಧನ-ಸಮ್ಮಾನ ವೃದ್ಧಿಯಾಗಲಿದೆ. ಕೆಲಸದ ನಿಮಿತ್ತ ಯಾತ್ರೆ ಸಂಭವಿಸಬಹುದು ಅದು ನಿಮ್ಮ ಪಾಲಿಗೆ ಶುಭಫಲಗಳನ್ನು ನೀಡಲಿದೆ. 

ಕನ್ಯಾ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಇದರಿಂದ ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದಲ್ಲಿ ಮನಸ್ಸಿಗೆ ತಕ್ಕಂತೆ ಪರಿಣಾಮಗಳು ಸಿಗಲಿದ್ದು, ಉತ್ತಮ ಧನಲಾಭವಾಗುವ ಎಲ್ಲಾ ಸಂಕೇತಗಳಿವೆ. ಪಿತ್ರಾರ್ಜಿತ ಸಂಪತ್ತಿನಿಂದ ನಿಮಗೆ ಲಾಭ ಕೂಡ ಸಿಗಲಿದೆ. 

ಧನು ರಾಶಿ: ನಿಮ್ಮ ರಾಶಿಯ ಲಗ್ನ ಭಾವದಲ್ಲಿ ಶುಕ್ರನ ಈ ಗೋಚರ ನೆರೆವೆರುತ್ತಿದೆ. ಇದರಿಂದ ನಿಮ್ಮ ವ್ಯಕ್ತಿತ್ವ ಭಾರಿ ಹೊಳೆಯಲಿದೆ. ಕಾರ್ಯಶೈಲಿ ಕೂಡ ಉತ್ತಮವಾಗಲಿದೆ. ಸ್ಥಾನಮಾನ-ಐಶ್ವರ್ಯ ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ಮದುವೆಯ ಯೋಗ ನಿರ್ಮಾಣಗೊಳ್ಳುತ್ತಿದೆ. ವೃತ್ತಿಜೀವನದಲ್ಲಿ ಉನ್ನತಿ ಇರಲಿದೆ. ಹಣವನ್ನು ಸಾಕಷ್ಟು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ಈ ಅವಧಿಯಲ್ಲಿ ಶುಕ್ರನ ದೃಷ್ಟಿ ನಿಮ್ಮ ಗೋಚರ ಜಾತಕದ ಸಪ್ತಮ ಭಾವದ ಮೇಲೆ ಬೀಳುತ್ತಿದ್ದು, ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಸರ್ಕಾರಿ ನೌಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಲಭಿಸಲಿದೆ.

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link